Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಸ್ವಾತಂತ್ರ್ಯ ದಿನಾಚರಣೆ ನಮ್ಮ ಇತಿಹಾಸ...

ಸ್ವಾತಂತ್ರ್ಯ ದಿನಾಚರಣೆ ನಮ್ಮ ಇತಿಹಾಸ ನೆನಪಿಸಿಕೊಳ್ಳುವ ದಿನ : ಸಂತೋಷ್ ಲಾಡ್

ವಾರ್ತಾಭಾರತಿವಾರ್ತಾಭಾರತಿ15 Aug 2025 10:20 PM IST
share
ಸ್ವಾತಂತ್ರ್ಯ ದಿನಾಚರಣೆ ನಮ್ಮ ಇತಿಹಾಸ ನೆನಪಿಸಿಕೊಳ್ಳುವ ದಿನ : ಸಂತೋಷ್ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನಾಚರಣೆ ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು, ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಸಿಗುವ ಒಂದು ಅವಕಾಶ. ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

ಶುಕ್ರವಾರ ಧಾರವಾಡ ಜಿಲ್ಲಾಡಳಿತವು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 79ನೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೇರವೆರಿಸಿ ಅವರು ಮಾತನಾಡಿದರು.

ಏಕತೆ, ಸತ್ಯಾಗ್ರಹ, ಅಹಿಂಸೆ ಹಾಗೂ ಶಾಂತಿ ಮಾರ್ಗವನ್ನು ಅನುಸರಿಸಿ ಸ್ವಾತಂತ್ರ್ಯ ಗಳಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಭಾರತದ ಸ್ವಾತಂತ್ರ್ಯದ ಚಳವಳಿಯನ್ನು ರೂಪಿಸಿದ ನಮ್ಮ ಹಿರಿಯ ಹೋರಾಟಗಾರರಾದ ರಾಜಾರಾಮ್ ಮೋಹನ್ ರಾಯ್, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ದಾದಾಬಾಯಿ ನೌರೋಜಿ, ಬಾಲ ಗಂಗಾಧರ ತಿಲಕ್, ಗೋಖಲೆ, ಲಾಲಾ ಲಜಪತರಾಯ್, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ನೇತಾಜಿ ಸುಭಾಷ್‍ಚಂದ್ರ ಬೋಸ್, ಭಗತ್‍ಸಿಂಗ್, ಮೌಲಾನಾ ಅಬುಲ್ ಕಲಾಂ ಆಝಾದ್ ಮೊದಲಾದ ಮಹನೀಯರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಧಾರವಾಡ ಜಿಲ್ಲೆಯ ಮೈಲಾರ ಮಹದೇವಪ್ಪ, ಆರ್.ಆರ್.ದಿವಾಕರ್, ಉಮಾಬಾಯಿ ಕುಂದಾಪುರ, ಎನ್.ಎಸ್.ಹರಡೀಕರ್, ಕೆ.ಎಫ್.ಪಾಟೀಲ್, ಗೋವಿಂದಾಚಾರ್ಯ ಅಗ್ನಿಹೋತ್ರಿ, ನರಸಿಂಹ ದಾಬಡೆ, ಡೆಪ್ಯೂಟಿ ಚನ್ನಬಸಪ್ಪ, ಸರ್.ಸಿದ್ದಪ್ಪ ಕಂಬಳಿ, ಅರಟಾಳ ರುದ್ರಗೌಡರು ಸೇರಿದಂತೆ ಮೊದಲಾದ ನೇತಾರರು ಸ್ವಾತಂತ್ರ್ಯ ಹೋರಾಟದಲ್ಲಿ ಕೈ ಜೋಡಿಸಿದ್ದರು ಎಂದು ಸಂತೋಷ್ ಲಾಡ್ ಸ್ಮರಿಸಿದರು.

ನಮ್ಮ ದೇಶದ ಹೆಮ್ಮೆಯ ಸಂಕೇತವಾಗಿರುವ ರಾಷ್ಟ್ರಧ್ವಜವನ್ನು ಧಾರವಾಡದ ಗರಗ ಹಾಗೂ ಹುಬ್ಬಳ್ಳಿಯ ಬೆಂಗೇರಿಯಲ್ಲಿ ಸಿದ್ಧಪಡಿಸಿ, ಇಡೀ ದೇಶಕ್ಕೆ ಒದಗಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

ಅಂಬೇಡ್ಕರ್ ರಚಿಸಿರುವ ಸಂವಿಧಾನದ ಪೂರ್ವ ಪೀಠಿಕೆಯು ನಮ್ಮ ಸ್ವಾತಂತ್ರ್ಯ ಹೋರಾಟದ ಆದರ್ಶಗಳನ್ನು ಒಳಗೊಂಡಿದೆ. ಉತ್ತಮ ನಾಗರಿಕರಾಗಲು, ಕಷ್ಟಪಟ್ಟು ಕೆಲಸ ಮಾಡಲು ಮತ್ತು ನಮ್ಮ ದೇಶದ ಪ್ರಗತಿಗೆ ಕೊಡುಗೆ ನೀಡಲು ನಾವು ಪಣ ತೊಡೋಣ ಹಾಗೂ ಬಲಿಷ್ಠ ಭಾರತದ ಕನಸನ್ನು ಜೀವಂತವಾಗಿರಿಸೋಣ ಎಂದು ಅವರು ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರವು ರೈತರು, ಕಾರ್ಮಿಕರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲ ವರ್ಗದ ಬಡ ಜನತೆಗೆ ಭದ್ರತೆಯನ್ನು ಒದಗಿಸಲು ಸದಾ ಬದ್ಧವಾಗಿದೆ. ನಮ್ಮ ಸರಕಾರದ ಮೂಲ ಉದ್ದೇಶ ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದಾಗಿದೆ ಎಂದು ಸಂತೋಷ್ ಲಾಡ್ ಹೇಳಿದರು.

ವೇದಿಕೆ ಮೇಲೆ ಸಭಾಪತಿ ಬಸವರಾಜ ಹೊರಟ್ಟಿ, ಬಾಲವಿಕಾಸ ಅಕಾಡಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿ.ಪಂ.ಸಿಇಒ ಪಾಟೀಲ್ ಭುವನೇಶ ದೇವಿದಾಸ, ಎಸ್ಪಿ ಗುಂಜನ್ ಆರ್ಯ, ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪವಾರ, ಅಪರ ಜಿಲ್ಲಾಧಿಕಾರಿ ಗೀತಾ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರು ಉಪಸ್ಥತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X