ಹುಬ್ಬಳ್ಳಿ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ, ಆ.17: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ರವಿವಾರ ನಂದಗೋಕುಲ ಬಡಾವಣೆಯಲ್ಲಿ ವರದಿಯಾಗಿದೆ.
ಮೃತ ಮಹಿಳೆಯನ್ನು ಜಯಶ್ರೀ ಬಡಿಗೇರ್ (31) ಎಂದು ಗುರುತಿಸಲಾಗಿದೆ.
ಜಯಶ್ರೀ ಅವರು ಮೇ 21ರಂದು ನಂದಗೋಕುಲ ಬಡಾವಣೆ ನಿವಾಸಿ ಶಿವಾನಂದ್ ಬಡಿಗೇರ್ ಎಂಬವರೊಂದಿಗೆ ವಿವಾಹವಾಗಿದ್ದರು. ಪುತ್ರಿಯ ಸಾವಿನ ಸಂಬಂಧ ಅನುಮಾನ ವ್ಯಕ್ತಪಡಿಸಿದ ಪೋಷಕರು, ತಮ್ಮ ಮಗಳನ್ನು ಶಿವಾನಂದ್ ಬಡಿಗೇರ್ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





