ರಾಜ್ಯದ ಅಭಿವೃದ್ಧಿ ಸಂಬಂಧ ಹಿರಿಯ ಸಚಿವರ ಜೊತೆ ಸಿಎಂ ಸಭೆ : ಸಲೀಂ ಅಹ್ಮದ್

ಹುಬ್ಬಳ್ಳಿ, ಅ.10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಸಂಬಂಧ ಹಿರಿಯ ಸಚಿವರ ಸಭೆ ನಡೆಸಿದ್ದಾರೆ ಎಂದು ಸರಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದ್ದಾರೆ.
ಹಿರಿಯ ಸಚಿವರ ಜೊತೆಗೆ ಸಭೆ ವಿಚಾರ ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜ್ಯದ ಅಭಿವೃದ್ಧಿ ಸಲುವಾಗಿ ಸಭೆ ನಡೆದಿದೆ. ಅದಕ್ಕೆ ಯಾವುದೇ ರೀತಿಯ ಅಪಾರ್ಥ ಬೇಡ ಎಂದರು.
ಸಚಿವ ಸ್ಥಾನದ ಆಕಾಂಕ್ಷಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಲೀಂ ಅಹ್ಮದ್, ಕಳೆದ ಬಾರಿಯೇ ನಾನು ಸಚಿವನಾಗಬೇಕಿತ್ತು. ನಾಲ್ಕು ಮಂದಿ ಕೆಪಿಸಿಸಿ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಲ್ಲಿ ನನ್ನನ್ನು ಬಿಟ್ಟು ಉಳಿದವರನ್ನು ಸಚಿವರನ್ನಾಗಿ ಮಾಡಲಾಗಿದೆ. ಆದರೆ, ನನ್ನ ಯಾಕೆ ಬಿಟ್ಟರು ಎಂದು ಗೊತ್ತಿಲ್ಲ. ಈ ಬಾರಿ ನನಗೆ ಸಚಿವನಾಗುವ ಭರವಸೆ ಇದೆ ಎಂದು ಹೇಳಿದರು.
Next Story





