ಮಹಿಳೆಯ ವಿವಸ್ತ್ರ ಪ್ರಕರಣ | ಕೇಶ್ವಾಪುರ ಠಾಣಾಧಿಕಾರಿ ವರ್ಗಾವಣೆ

ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ : ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣಾಧಿಕಾರಿಯನ್ನು ವರ್ಗಾವಣೆಗೊಳಿಸಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಇನ್ ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಸ್ ಕೆ. ಹಟ್ಟಿ ಅವರನ್ನು ವರ್ಗಾವಣೆ ಮಾಡಿದ್ದು ಅವರ ಸ್ಥಾನಕ್ಕೆ ಘಂಟಿಕೇರಿ ಪೊಲೀಸ್ ಇನ್ ಸ್ಪೆಕ್ಟರ್ ಜಾಧವ್ ಅವರನ್ನು ಪ್ರಭಾರಿಯಾಗಿ ನಿಯೋಜಿಸಲಾಗಿದೆ.
ಸುಜಾತಾ ಹಂಡಿ ವಿರುದ್ಧ ದಾಖಲಾದ ಪ್ರಕರಣಗಳ ತನಿಖೆಗೆ ಎಸಿಪಿ ಶಿವರಾಜ್ ಕಟಕಬಾವಿ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
Next Story





