ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅವಕಾಶ: ಮೇಯರ್ ಸ್ಪಷ್ಟನೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಸಾಕಷ್ಟು ವಿರೋಧದ ನಡುವೆಯೂ ಹುಬ್ಬಳ್ಳಿಯ ಪ್ರತಿಷ್ಠಿತ ಚೆನ್ನಮ್ಮ (ಈದ್ಗಾ)ಮೈದಾನದಲ್ಲಿ ಮೂರುದಿನ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗಿದೆ ಎಂದು ಮೇಯರ್ ವೀಣಾ ಭರದ್ವಾಡ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ವಿಪಕ್ಷಗಳು ಅನುಮತಿ ನೀಡದಂತೆ ಸಾಕಷ್ಟು ವಿರೋಧ ಮಾಡಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನಿರ್ದೇಶನದ ಮೇರೆಗೆ ಸೂಕ್ತ ನಿರ್ಧಾರವನ್ನು ಕೈಗೊಂಡು ಕಳೆದ ವರ್ಷದಂತೆ ಈ ವರ್ಷವೂ ಕೂಡ ಮೂರು ದಿನಗಳ ಅವಕಾಶ ನೀಡಲಾಗಿದೆ ಎಂದರು.
ಇನ್ನೂ ಹನ್ನೊಂದು ದಿನಗಳ ಕಾಲ ಅವಕಾಶ ಕೋರಿ ಸಾಕಷ್ಟು ಅರ್ಜಿಗಳು ಬಂದಿದ್ದವು. ಎಲ್ಲ ಮನವಿಯನ್ನು ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರದ ಮೂಲಕ ಸಭೆಯಲ್ಲಿ ಠರಾವು ಪಾಸ್ ಮಾಡಿ ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದರು.
Next Story





