Alnavar | ಬಾಲಕಿಯ ಲೈಂಗಿಕ ದೌರ್ಜನ್ಯ ಆರೋಪ; ವ್ಯಕ್ತಿಯ ಬಂಧನ

ಅಳ್ನಾವರ : ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಕ್ತುಂಸಾಬ ಹುಸೇನಸಾಬ ನದಾಫ್ (42) ಎಂಬಾತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ಕುಟುಂಬದವರು ದೂರಿದ್ದಾರೆ.
ಕುಟುಂಬದವರ ದೂರಿನ ಮೇರೆಗೆ ಪೊಲೀಸರು ಕ್ರಮಕೈಗೊಂಡು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.
Next Story




