Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ʼಸ್ಟಿಂಗ್ ಆಪರೇಷನ್ʼ ಕೆಳಮಟ್ಟದ ರಾಜಕಾರಣ...

ʼಸ್ಟಿಂಗ್ ಆಪರೇಷನ್ʼ ಕೆಳಮಟ್ಟದ ರಾಜಕಾರಣ : ಬಸವರಾಜ ರಾಯರಡ್ಡಿ

ವಾರ್ತಾಭಾರತಿವಾರ್ತಾಭಾರತಿ16 Oct 2026 7:27 PM IST
share
ʼಸ್ಟಿಂಗ್ ಆಪರೇಷನ್ʼ ಕೆಳಮಟ್ಟದ ರಾಜಕಾರಣ : ಬಸವರಾಜ ರಾಯರಡ್ಡಿ

ಧಾರವಾಡ : ರಾಜ್ಯದಲ್ಲಿ ಸದ್ಯ ಚರ್ಚೆಯಲ್ಲಿರುವ ʼಸ್ಟಿಂಗ್ ಆಪರೇಷನ್ʼ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ, ʼಸ್ಟಿಂಗ್ ಆಪರೇಷನ್ ನಡೆಸುವುದು ಕೆಳಮಟ್ಟದ ರಾಜಕಾರಣʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ವಿಚಾರವಾಗಿ ಸದ್ಯ ಹೆಚ್ಚು ಮಾತನಾಡುವುದಿಲ್ಲ. ಈ ಕುರಿತು ತೀರ್ಮಾನ ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಅವರಿಗೆ ವಹಿಸಲಾಗಿದೆ. ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಬೇಕು, ನ್ಯಾಯಾಂಗ ತನಿಖೆ ನಡೆಸಬೇಕು ಎಂಬಿತ್ಯಾದಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಅಭಿಪ್ರಾಯಕ್ಕೆ ಅನುಗುಣವಾಗಿ ವಿವಿಧ ತನಿಖಾ ಕ್ರಮಗಳನ್ನು ಸೂಚಿಸುತ್ತಿದ್ದಾರೆ. ಇದರಲ್ಲಿ ತಪ್ಪೇನಿಲ್ಲ. ಆದರೆ, ಈ ವಿಚಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೇ ಬಿಡಲಾಗಿದೆ. ಸ್ಟಿಂಗ್ ಆಪರೇಷನ್ ಕುರಿತು ವಿಚಾರಣೆ ನಡೆಯಬೇಕು ಎಂಬುದು ನಿಜ. ಆದರೆ, ಇಂತಹ ರಾಜಕಾರಣ ಕೆಳಮಟ್ಟದ್ದಾಗಿದೆ ಎಂದು ಹೇಳಿದರು.

ನಾನು ಧಾರವಾಡಕ್ಕೆ ಚುನಾವಣಾ ಪ್ರಚಾರಕ್ಕಾಗಿ ಬಂದಿದ್ದೇನೆ. ಚುನಾವಣಾ ಅಧಿಕಾರಿಗಳಿಂದ ಅಗತ್ಯ ಅನುಮತಿ ಪಡೆದು, ನಿಯಮಗಳ ಪ್ರಕಾರವೇ ಪ್ರಚಾರ ನಡೆಸುತ್ತಿದ್ದೇವೆ. ಕೆಲವು ವಿಚಾರಗಳ ಕುರಿತು ಇಲ್ಲಿ ಮಾತನಾಡಲು ಸಾಧ್ಯವಿಲ್ಲ. ಇದು ಆ ಬಗ್ಗೆ ಚರ್ಚಿಸುವ ವೇದಿಕೆಯಲ್ಲ ಎಂದು ಸ್ಪಷ್ಟಪಡಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ರಾಯರಡ್ಡಿ, ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವುದು ಅಗತ್ಯವಾಗಿದೆ. ಆದರೆ, ಸದ್ಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಬ್ಬಿಗೆ ಯಾವ ದರ ನಿಗದಿಪಡಿಸಲಾಗುತ್ತದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.

ಈ ಕುರಿತು ಸಂಬಂಧಿಸಿದ ಸಕ್ಕರೆ ಸಚಿವರು, ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರು ಚರ್ಚೆ ನಡೆಸುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ರಾಜ್ಯ ಸರಕಾರ ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Tags

Basavaraja Rayareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X