Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಆಪರೇಷನ್ ಕಮಲದ ಮೂಲಕ ಸರಕಾರ...

ಆಪರೇಷನ್ ಕಮಲದ ಮೂಲಕ ಸರಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Aug 2024 4:09 PM IST
share
siddaramayyah

ಹುಬ್ಬಳ್ಳಿ, ಆ.30: ಆಪರೇಷನ್ ಕಮಲದ ಮೂಲಕ ಸರಕಾರ ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದ್ದು, ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ ಎಂದೂ ಬಲಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭವಲ್ಲ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರು ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು.

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ

ಸಿದ್ದರಾಮಯ್ಯನವರ ಮೇಲೆ ಮಾತ್ರ ಇಂತಹ ಪಿತೂರಿ ನಡೆಯುತ್ತಿರುವ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಸೇರಿ, ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಬಾಕಿ ಪ್ರಕರಣಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಲು ರಾಜ್ಯಪಾಲರಿಗೆ ಒತ್ತಾಯ

ಮುಡಾ ಪ್ರಕರಣದಲ್ಲಿ ಸಿಎಂ ರಾಜಿನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ವಿಜಯೇಂದ್ರ ಹೇಳಿದರು ಎಂದು ರಾಜೀನಾಮೆ ನೀಡಲು ಸಾಧ್ಯವೇ ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ, ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜುಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ ಎಂದು ತಿಳಿಸಿದರು.

ಪರಿಸರ ತೀರುವಳಿ ಬಂದ ತಕ್ಷಣ ಮಹಾದಾಯಿಗೆ ಚಾಲನೆ

ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದವಿದೆ. ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

16ನೇ ಹಣಕಾಸು ಆಯೋಗ ರಾಜ್ಯದ ಅನುದಾನ ಕೊರತೆ ನೀಗಿಸುವ ವಿಶ್ವಾಸ

ನಿನ್ನೆ 16ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸು ಮಾಡಿದ್ದ 11495 ಕೋಟಿ ರೂ. ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ತೆರಿಗೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು , 1.66 ರಷ್ಟು ಪ್ರಮಾಣ ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರ್ಉ 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16 ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ನಟ ದರ್ಶನ್ ಪ್ರಕರಣ: ತಪ್ಪೆಸೆಗಿರುವ ಅಧಿಕಾರಿಗಳ ಅಮಾನತು

ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ನಿಟ್ಟಿನಲ್ಲಿ ಕರ್ತವ್ಯ ಲೋಪ ಎಸಗಿದ್ದ 9 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಜೊತೆಗೆ ಉಳಿದ ಆರೋಪಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಕಳಿಸಲಾಗಿದ್ದು, ಇಂತಹ ತಪ್ಪು ನಡೆದ ಜೈಲಿನ ಡಿಜಿಪಿಗೆ ನೋಟೀಸನ್ನೂ ನೀಡಲಾಗಿದೆ ಎಂದರು.

ಮುಡಾದ ಮಾಜಿ ಆಯುಕ್ತರ ಮೇಲೆ ಆರೋಪವಿದ್ದು, ಅವರನ್ನು ಹಾವೇರಿ ವಿವಿಗೆ ಕುಲಸಚಿವರಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X