Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ʼಸ್ಟಿಂಗ್ ಆಪರೇಷನ್ʼ ಸೂತ್ರಧಾರಿ,...

ʼಸ್ಟಿಂಗ್ ಆಪರೇಷನ್ʼ ಸೂತ್ರಧಾರಿ, ಪಾತ್ರಧಾರಿಗಳು ಕಾಂಗ್ರೆಸ್‌ನವರೇ : ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ15 Oct 2026 10:01 PM IST
share
ʼಸ್ಟಿಂಗ್ ಆಪರೇಷನ್ʼ ಸೂತ್ರಧಾರಿ, ಪಾತ್ರಧಾರಿಗಳು ಕಾಂಗ್ರೆಸ್‌ನವರೇ : ಸಿ.ಟಿ.ರವಿ

ಹುಬ್ಬಳ್ಳಿ : ಸ್ಟಿಂಗ್ ಆಪರೇಷನ್ ಪ್ರಕರಣದ ಸೂತ್ರಧಾರಿ ಮತ್ತು ಪಾತ್ರಧಾರಿಗಳು ಕಾಂಗ್ರೆಸ್‌ನವರೇ. ಪ್ರಕರಣದ ಬಗ್ಗೆ ಮಾಹಿತಿ ನೀಡಿದವರನ್ನು ಬಂಧಿಸುವ ಮೂಲಕ ಸತ್ಯವನ್ನು ಮುಚ್ಚಿಡುವ ಪ್ರಯತ್ನ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಉದ್ದೇಶದಿಂದ ವೀಡಿಯೊ ಬಳಸಲಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿ, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಕೆಪಿಎಸ್‌ಸಿ ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಆರಕ್ಕೂ ಹೆಚ್ಚು ಸಚಿವರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ. ತಮ್ಮವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನೇಮಕಾತಿ ವ್ಯವಸ್ಥೆಯನ್ನು ಬಳಸಿಕೊಂಡಿರುವ ಆರೋಪಗಳಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿರುವ ಅನುಮಾನವಿದೆ ಎಂದು ಸಿ.ಟಿ.ರವಿ ಆರೋಪಿಸಿದರು.

ತನಿಖೆಗೆ ಸಂಬಂಧಿಸಿದ ಅಧಿಕಾರಿಗಳ ಬಗ್ಗೆ ಸರಕಾರಕ್ಕೆ ಭಯವೇಕೆ ಎಂದು ಪ್ರಶ್ನಿಸಿದ ಅವರು, ಅಲೋಕ್ ಕುಮಾರ್ ಮತ್ತು ಡಿಐಜಿ ದಿವ್ಯಾ ಅವರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆಯಿಂದ ಸತ್ಯ ಹೊರಬರಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳು ಪಂಚರ್ ಆಗಿದ್ದು, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ ಮಾತ್ರ ನಿರಂತರವಾಗಿ ಜಾರಿಯಲ್ಲಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಮೂರು ತಿಂಗಳಿನಿಂದ ಬಾಕಿ ಉಳಿದಿದೆ. ಈ ಹಣ ಎಲ್ಲಿಗೆ ಹೋಯಿತು ಎಂಬುದಕ್ಕೆ ಸರಕಾರ ಸ್ಪಷ್ಟ ಉತ್ತರ ನೀಡಿಲ್ಲ. ಶಕ್ತಿ ಯೋಜನೆಯಿಂದ ಕೆಎಸ್ಸಾರ್ಟಸಿಗೆ ಶಕ್ತಿ ಬಂದಿಲ್ಲ; ಬದಲಿಗೆ ನೌಕರರ ಭವಿಷ್ಯ ನಿಧಿಯ ಹಣವನ್ನೂ ಡೀಸೆಲ್ ಖರೀದಿಗೆ ಬಳಸಬೇಕಾದ ಸ್ಥಿತಿ ಎದುರಾಗಿದೆ ಎಂದು ಟೀಕಿಸಿದರು.

ಜನನ ಮತ್ತು ಮರಣ ಪ್ರಮಾಣಪತ್ರಗಳ ಶುಲ್ಕ, ಆರ್‌ಟಿಸಿ, ಸ್ಟಾಂಪ್ ಪೇಪರ್, ವಿದ್ಯುತ್ ಬಿಲ್, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದಿಂದ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದರು.

ರಾಜ್ಯದಲ್ಲಿ ಬರ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಕೊರತೆ ಹಾಗೂ ರೈತರ ಸಂಕಷ್ಟಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು. ಸ್ಟಿಂಗ್ ಆಪರೇಷನ್ ವಿವಾದಕ್ಕಿಂತ ಜನರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಹಾಂತೇಶ ಕವಟಗಿಮಠ, ರಾಜು ಕೋರ್ಯಾಣಮಠ ಷಹಲವರಿದ್ದರು.

Tags

C. T. Ravi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X