Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ದಂಪತಿಗೆ ಎರಡೇ ಮಕ್ಕಳು ಸಾಕು; ಅವರಿಗೆ...

ದಂಪತಿಗೆ ಎರಡೇ ಮಕ್ಕಳು ಸಾಕು; ಅವರಿಗೆ ಉತ್ತಮ ಸಂಸ್ಕಾರ ನೀಡಿ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 Dec 2025 9:20 PM IST
share
ದಂಪತಿಗೆ ಎರಡೇ ಮಕ್ಕಳು ಸಾಕು; ಅವರಿಗೆ ಉತ್ತಮ ಸಂಸ್ಕಾರ ನೀಡಿ : ಸಿಎಂ ಸಿದ್ದರಾಮಯ್ಯ
"ಅಂತರ್ಜಾತಿ ವಿವಾಹಗಳು ಸಮಾಜದಲ್ಲಿ ಸಮಾನತೆ ತರಲು ಸಹಾಯಕ"

ಧಾರವಾಡ : ಬಸವಣ್ಣನವರು ಕೆಳಜಾತಿಯವರೊಂದಿಗೆ ಮೆಲ್ಜಾತಿಯವರ ಮದುವೆ ಮಾಡಿ, ಅಂದೇ ಸಮಾಜದಲ್ಲಿ ಸಮಾನತೆ ತರಲು ಮುನ್ನುಡಿ ಬರೆದರು. ಸಮಾಜದಲ್ಲಿ ಅಂತರ್ಜಾತಿ ಮದುವೆಗಳು ಆಗಬೇಕು. ಇದರಿಂದ ಸಮಾಜದ ಸರ್ವರಲ್ಲಿ ಸಮಾನತೆ ತರಲು ಸಹಾಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಅವರ ಪುತ್ರ ನವೀನ ಕುಮಾರ ಅವರ ವಿವಾಹ ಆರತಕ್ಷತೆ ಅಂಗವಾಗಿ ಆಯೋಜಿಸಿದ್ದ 75 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶುಭಾಶಯ ಕೋರಿ ಅವರು ಮಾತನಾಡಿದರು.

ʼಆರತಿಗೊಬ್ಬ ಕೀರ್ತಿಗೊಬ್ಬʼ ಇಬ್ಬರೇ ಸಾಕು :

ನಮ್ಮ ಸಮಾಜದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧರ ನಡುವೆ ಎಲ್ಲರೂ ಮನುಷ್ಯರು, ಮನುಷ್ಯರಾಗಿ ಬದುಕಬೇಕು ಮತ್ತು ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಬೇಕು. ಜಾತಿ ವ್ಯವಸ್ಥೆ ಹೋಗಬೇಕೆಂದರೆ ಅಂತರ್ಜಾತಿಯ ವಿವಾಹಗಳು ಹೆಚ್ಚು ಹೆಚ್ಚು ಆಗಬೇಕು. ನವಲಗಂದದಲ್ಲಿ ಮದುವೆಯು ಜಾತ್ರೆಯಂತೆ ಕಾಣುತ್ತಿದೆ. ಕೋನರೆಡ್ಡಿ ಅವರು ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಈ ಸಂದರ್ಭದಲ್ಲಿ ಸೇರಿಸಿದ್ದಾರೆ ಮತ್ತು ವಧು-ವರರು ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅವರಲ್ಲಿ ನನ್ನ ಕಿವಿಮಾತು ಹೇಳುವುದೇನೆಂದರೆ ʼಆರತಿಗೊಬ್ಬ ಕೀರ್ತಿಗೊಬ್ಬʼ ಎಂಬ ನುಡಿ ಮುತ್ತಿನಂತೆ ಇಬ್ಬರೇ ಮಕ್ಕಳನ್ನು ಮಾಡಿಕೊಳ್ಳಬೇಕು. ಏಕೆಂದರೆ ಭಾರತದಲ್ಲಿ ಜನಸಂಖ್ಯೆ ಅತೀ ಹೆಚ್ಚಾಗುತ್ತಾ ಹೋಗುತ್ತಿದೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾತನಾಡಿ, ನವಲಗುಂದದಲ್ಲಿ ಐತಿಹಾಸಿಕ ಕಾರ್ಯಕ್ರಮವನ್ನು ಶಾಸಕರಾದ ಎನ್.ಎಚ್ ಕೋನರೆಡ್ಡಿ ಮಾಡಿದ್ದಾರೆ. ಅವರು ಬಡವರು ಮತ್ತು ದಲಿತರ ಪರ ಹೋರಾಟವನ್ನು ಮಾಡುತ್ತಾ ಬಂದವರು. ಒಬ್ಬ ಒಳ್ಳೆಯ ನಾಯಕ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ.ಜಾರ್ಜ್, ಎಚ್.ಸಿ.ಮಹಾದೇವಪ್ಪ, ಕೃಷ್ಣಭೈರೆಗೌಡ, ರಾಮಲಿಂಗಾರಡ್ಡಿ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಪ್ರಸಾದ ಅಬ್ಬಯ್ಯ, ಬಸವರಾಜ ಶಿವಣ್ಣವರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ವಿಪ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಸೇರಿದಂತೆ ವಿವಿಧ ಜನ್ರತಿನಿಧಿಗಳು, ಗಣ್ಯರು ಭಾಗವಹಿಸಿ, ನವ ವಧುವರರಿಗೆ ಆಶಿರ್ವದಿಸಿ, ಶುಭಾಶಯ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X