ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣ ಮಾಡಿದ್ದು ಕಾಂಗ್ರೆಸ್: ಆರ್. ಅಶೋಕ್ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ಪದೇ ಪದೇ ಹಿಂದೂ ಧರ್ಮಕ್ಕೆ ಅವಮಾನ ಮಾಡೋ ಕೆಲಸ ಆಗುತ್ತಿದೆ. ಕಾಂಗ್ರೆಸ್ ನಲ್ಲಿ ಹಿಂದೂ ವಿರೋಧಿ ಹಿಂದೂ ಪರ ಎಂಬ ಎರಡು ಗ್ಯಾಂಗ್ ಇದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಸಿಬಿಯನ್ನು ಧರ್ಮಸ್ಥಳ ಹೆಬ್ಬಾಗಿಲಿಗೆ ನುಗ್ಗಿಸ್ತೇನೆ ಅಂತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ನಾವು ರಾಜಕಾರಣ ಮಾಡಿಲ್ಲ. ಈ ಪ್ರಕರಣದಲ್ಲಿ ರಾಜಕಾರಣ ಮಾಡಿದ್ದು ಕಾಂಗ್ರೆಸ್. ಇದರ ಹಿಂದೆ ದಂಡುಪಾಳ್ಯ ರೀತಿಯ ನಗರ ನಕ್ಸಲರ ಗ್ಯಾಂಗ್ ಇದರ ಹಿಂದಿದೆ. ಸಮೀರ್, ಪಿ.ಎಫ್.ಐ , ಎಸ್.ಡಿ.ಪಿ.ಐ. ಕಾರ್ಯಕರ್ತ ಎಂದ ಅವರು, ಯ್ಯೂಟೂಬ್ ಚಾನಲ್ ಮಾಡಲು ಎಲ್ಲಿಂದ ದುಡ್ಡು ಬಂದಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂ ಧರ್ಮ ಬಿಜೆಪಿ ಸ್ವತ್ತಲ್ಲಾ ಅನ್ನೋ ಡಿಸಿಎಂ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಫಸ್ಟ್ ನಿಮ್ಮ ಸ್ವತ್ತಾ ಅಂತ ಡಿ.ಕೆ ಹೇಳಲಿ. ಮಸೀದಿ ಬಗ್ಗೆ ಈ ರೀತಿ ಆರೋಪ ಬಂದಿದ್ರೆ ನೀವು ತನಿಖೆಗೆ ಕೊಡ್ತಿದ್ದೀರಾ? ಎದೆ ಮುಟ್ಟಿಕೊಂಡು ಹೇಳಿ ಎಂದಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ನಕ್ಸಲರು ಕಾಡು ಬಿಟ್ಟು ನಾಡಿಗೆ ಬಂದಿದ್ದಾರೆ. ಟಿಪ್ಪು ಪ್ರೇರಿತ ಗ್ಯಾಂಗ್ ಗೆ ಸಿದ್ದರಾಮಯ್ಯ ಬೆಂಬಲ ನೀಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.





