Dharwad | ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ
ಧಾರವಾಡ : ಕೊಲ್ಲಾಪುರದಿಂದ ಧಾರವಾಡಕ್ಕೆ ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಕಳೆದ ರಾತ್ರಿ ಮಹಾರಾಷ್ಟ್ರದ ಕೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಬೆಳಗ್ಗೆ ರೈಲ್ವೆ ಸಿಬ್ಬಂದಿ ಬೋಗಿ ಸ್ವಚ್ಛ ಮಾಡಲು ಬಂದಾಗ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ರೇಲ್ವೆ ಪೊಲೀಸರು ಮತ್ತು ಧಾರವಾಡ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story




