Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಪಶ್ಚಿಮ ಪದವೀಧರ ಕ್ಷೇತ್ರ; ಧಾರವಾಡ...

ಪಶ್ಚಿಮ ಪದವೀಧರ ಕ್ಷೇತ್ರ; ಧಾರವಾಡ ಜಿಲ್ಲೆಯಲ್ಲಿ ಶೇ.69.16 ಮತದಾನ

ನವಲಗುಂದದಲ್ಲಿ ಕೈ-ಕಮಲ ಕಾರ್ಯಕರ್ತರ ಜಟಾಪಟಿ

ವಾರ್ತಾಭಾರತಿವಾರ್ತಾಭಾರತಿ23 Oct 2026 11:53 PM IST
share
ಪಶ್ಚಿಮ ಪದವೀಧರ ಕ್ಷೇತ್ರ; ಧಾರವಾಡ ಜಿಲ್ಲೆಯಲ್ಲಿ ಶೇ.69.16 ಮತದಾನ

ಧಾರವಾಡ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಪ್ರಕ್ರಿಯೆ ಶುಕ್ರವಾರ ಜಿಲ್ಲಾದ್ಯಂತ ಬಿರುಸಿನಿಂದ ನಡೆಯಿತು. ಸಂಜೆ 4ರವರೆಗೆ ಧಾರವಾಡ ಜಿಲ್ಲೆಯಲ್ಲಿ ಶೇ. 69.16ರಷ್ಟು ಮತದಾನ ದಾಖಲಾಗಿದ್ದು, ಸಂಜೆ ಸುರಿದ ಜೋರು ಮಳೆಯಿಂದಾಗಿ ಮತದಾನಕ್ಕೆ ಕೆಲಕಾಲ ಅಡ್ಡಿಯುಂಟಾಯಿತು. ಮತದಾನದ ಸಂದರ್ಭದಲ್ಲಿ ಹುಬ್ಬಳ್ಳಿ, ಧಾರವಾಡ ಹಾಗೂ ನವಲಗುಂದದ ವಿವಿಧ ಮತಗಟ್ಟೆಗಳ ಬಳಿ ಗೊಂದಲ, ವಾಗ್ವಾದ ಮತ್ತು ಗಲಾಟೆಗಳು ನಡೆದಿರುವುದು ಗಮನ ಸೆಳೆಯಿತು.

24,288 ಮಂದಿ ಮತದಾನ:

ಧಾರವಾಡ ಜಿಲ್ಲೆಯಲ್ಲಿ ಒಟ್ಟು 35,119 ಮತದಾರರು ನೋಂದಾಯಿಸಿಕೊಂಡಿದ್ದರು. ಸಂಜೆ 4 ರವರೆಗೆ 24,288 ಮಂದಿ ಮತ ಚಲಾಯಿಸಿದ್ದು, ಇವರಲ್ಲಿ 14,546 ಪುರುಷರು ಹಾಗೂ 9,742 ಮಹಿಳಾ ಮತದಾರರು ಇದ್ದಾರೆ.

ಪ್ರಮುಖರಿಂದ ಮತದಾನ:

ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು ಕುಟುಂಬ ಸಮೇತರಾಗಿ ಆಗಮಿಸಿ, ಬಸವೇಶ್ವರ ನಗರದ ಸರಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿಯ ಕೇಶ್ವಾಪುರದ ಫಾತಿಮಾ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಮೂವರಿಗೆ ಮತದಾನ ನಿರಾಕರಣೆ ಆರೋಪ:

ಹುಬ್ಬಳ್ಳಿಯ ವಿದ್ಯಾನಗರದ ಜೆ.ಜಿ. ಕಾಲೇಜಿನ ಮತಗಟ್ಟೆಯಲ್ಲಿ ಮೂವರು ಮತದಾರರಿಗೆ ಮತ ಚಲಾಯಿಸಲು ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿತು. ಈ ಘಟನೆಯನ್ನು ಖಂಡಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

ಮತಗಟ್ಟೆ ಸಿಬ್ಬಂದಿ ಮೂವರು ಮತದಾರರಿಗೆ ಮತದಾನ ಮಾಡಲು ಅವಕಾಶ ನೀಡಲಿಲ್ಲ ಎಂದು ಆರೋಪಿಸಿದ ಕಾರ್ಯಕರ್ತರು, ಈ ಕುರಿತು ಪ್ರತಿಭಟನೆ ನಡೆಸಿದರು. ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಅದನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ಅರುಣ್ ಪಾಟೀಲ್ ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಚುನಾವಣಾಧಿ ಕಾರಿಗಳು ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆ ಪರಿಶೀಲಿಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಪಾಟೀಲ್ ಆಗ್ರಹಿಸಿದರು.

ಕೈ-ಕಮಲ ಮುಖಂಡರ ಜಟಾಪಟಿ:

ನವಲಗುಂದದಲ್ಲಿ ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು. ಸ್ಥಳೀಯ ತಾಲೂಕು ಪಂಚಾಯತ್ ಆವರಣದಲ್ಲಿನ ಮತಗಟ್ಟೆಯ ಹೊರಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ವಾಗ್ವಾದ ತೀವ್ರಗೊಂಡು, ಎರಡೂ ಪಕ್ಷಗಳ ಕಾರ್ಯಕರ್ತರು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದರು.

ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಎರಡೂ ಕಡೆಯವರನ್ನು ಸಮಾಧಾನಪಡಿಸಿದರು. ಇದರಿಂದ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನತೆ ನಿಯಂತ್ರಣಕ್ಕೆ ಬಂತು.

Tags

Dharwad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X