Dharwad | ಮೂವರು ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಧಾರವಾಡ : ತನ್ನ ಮೂವರು ಹೆಣ್ಣು ಮಕ್ಕಳಿಗೆ ವಿಷದ ಮಾತ್ರೆ ಉಣಿಸಿ, ತಾನೂ ಸಹ ವಿಷ ಸೇವಿಸಿದ್ದ ತಾಯಿ ಸೇರಿದಂತೆ ಒಂದು ಮಗು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಇನ್ನುಳಿದ ಇಬ್ಬರು ಮಕ್ಕಳು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ಸಮೀಪದ ಕರಡಿಗುಡ್ಡ ಗ್ರಾಮದಲ್ಲಿ ಶನಿವಾರ ನಡೆದ ಈ ಘಟನೆಯಲ್ಲಿ ತಾಯಿ ಸವಿತಾ ಮಲ್ಲಿಕಾರ್ಜುನ ಕುರಗುಂದ (38) ಹಾಗೂ ಎಂಟು ವರ್ಷದ ಗದಿಗೆವ್ವ ಕುರಗುಂದ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆರು ವರ್ಷದ ಭಾಗ್ಯಶ್ರೀ ಹಾಗೂ ಎರಡು ವರ್ಷದ ಹರ್ಷ ಎಂಬ ಮಕ್ಕಳ ಸ್ಥಿತಿ ಚಿಂತಾಜನಕವಾಗಿದ್ದು, ಸಾವು -ಬದುಕಿನ ಮಧ್ಯೆ ಹೋರಾಡುತ್ತಿವೆ.
ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story




