ಧಾರವಾಡ | ಕಾರು ಡಿವೈಡರ್ ಗೆ ಢಿಕ್ಕಿ: ಮೂವರು ಯುವಕರು ಮೃತ್ಯು, 3 ಮಂದಿ ಗಂಭೀರ

ಧಾರವಾಡ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದೆ.
ಮೃತರನ್ನು ದಾವಣಗೆರೆ ಮೂಲದ ವಿನಾಯಕ(25), ಮಂಜುನಾಥ್ (29) ಹಾಗೂ ಬಸವರಾಜ (34) ಎಂದು ಗುರುತಿಸಲಾಗಿದೆ. ಧಾರವಾಡ ಯಲಿಗಾರ ಓಣಿಯ ನಿವಾಸಿ ಬಸನಗೌಡ ಯಲ್ಲಪ್ಪಗೌಡ ಪಾಟೀಲ್ (26), ದಾವಣಗೆರೆಯ ಅಭಿಷೇಕ್ (30) ಮತ್ತು ಅಜಯ್ (26) ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ- ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story




