ಧಾರವಾಡ: ನ.14, 15ರಂದು ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ

ಧಾರವಾಡ: ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಧಾರವಾಡ ವತಿಯಿಂದ 45ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 14 ಮತ್ತು 15ರಂದು ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಈ ರಾಜ್ಯಮಟ್ಟದ ಕ್ರೀಡಾಕೂಟ ನಡೆಯುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಹಿರಿಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ನವೆಂಬರ್ 14ರಂದು ಬೆಳಗ್ಗೆ 9:30ಕ್ಕೆ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಮಾಜಿ ಉಪ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಆರ್ಎಲ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ವಿಜಯ ಸಂಕೇಶ್ವರ ಉಪಸ್ಥಿತಿ ವಹಿಸಲಿದ್ದಾರೆ.
ಮಹಿಳಾ ಸ್ಪರ್ಧೆಗಳಿಗೆ ಜಿಲ್ಲಾಧಿಕಾರಿ ಆರ್. ಸ್ನೇಹಲ್, ಪುರುಷರ ಸ್ಪರ್ಧೆಗಳಿಗೆ ಶಾಸಕ ಎನ್.ಎಚ್. ಕೊನರಡ್ಡಿ ಚಾಲನೆ ನೀಡಲಿದ್ದು, ಟ್ರೋಫಿ ಉದ್ಘಾಟನೆಯನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ನೆರವೇರಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಕ್ರೀಡಾಪಟುಗಳಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಕ್ರೀಡಾಕೂಟದ ಅಧ್ಯಕ್ಷತೆಯನ್ನು ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ವೆಂಕರಡ್ಡಿ ಕಿರೇಸೂರು ವಹಿಸಲಿದ್ದಾರೆ.
ಶಾಸಕರಾದ ಪ್ರಸಾದ್ ಅಬ್ಬಯ್ಯ, ಅರವಿಂದ ಬೆಲ್ಲದ್, ವಿನಯ ಕುಲಕರ್ಣಿ ಹಾಗೂ ಮಹೇಶ ಟೆಂಗಿನಕಾಯಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಲಕ್ಷ್ಮೀ ಬೆಜವಾಡ, ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ ಆಗಮಿಸಲಿದ್ದಾರೆ.
ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಡೇವಿಡ್ ಪ್ರೇಮನಾಥ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಉದ್ಯಮಿ ಡಾ.ವಿ.ಎಸ್.ವಿ. ಪ್ರಸಾದ್, ವಿರೇಶ ಹುಂಡಿ, ಸಂತೋಷ ಇಂಚಲ, ಶಂಕರ ಕೋಳಿವಾಡ, ಮನೋಹರ ಮೋರೆ, ಕೆ. ಆನಂದ, ಪಾಲಿಕೆ ಸದಸ್ಯ ಶಿವು ಹಿರೇಮಠ, ಹಿರಿಯ ನ್ಯಾಯವಾದಿ ಪಿ.ಎಚ್. ನೀರಲಕೇರಿ, ಸಮಾಜ ಸೇವಕಿ ಪ್ರೇಮಾ ಶೆರುಗಾರ, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಹುಬ್ಬಳ್ಳಿ ಘಟಕದ ಅಧ್ಯಕ್ಷ ಎ.ಎಫ್. ರೇಶ್ಮೀ, ಸರ್ಕಾರಿ ನಿವೃತ್ತ ನೌಕರರ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಎ. ಪಾಟೀಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ನವೆಂಬರ್ 15ರಂದು ಬೆಳಗ್ಗೆ 6ರಿಂದ ಅಂತಿಮ ಹಂತದ ಸ್ಪರ್ಧೆಗಳು ನಡೆಯಲಿದ್ದು, ಬಳಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧೆಗಳು ಪೂರ್ಣಗೊಂಡ ನಂತರ ಸಮಾರೋಪ ಸಮಾರಂಭ ನಡೆಯಲಿದ್ದು, ಅತಿ ಹೆಚ್ಚು ಅಂಕ ಗಳಿಸುವ ಜಿಲ್ಲೆಗೆ ಚಾಂಪಿಯನ್ ಟ್ರೋಫಿ ಹಾಗೂ ವೀರಾಗ್ರಣಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಧಾರವಾಡ ಜಿಲ್ಲಾಧ್ಯಕ್ಷ ವೆಂಕರಡ್ಡಿ ಕಿರೇಸೂರು, ಧಾರವಾಡದಲ್ಲಿ ಮೊದಲ ಬಾರಿಗೆ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಶನ್ ಉಪಾಧ್ಯಕ್ಷ ದಶರಥ ಕೂಟಕರ್, ಕಾರ್ಯದರ್ಶಿ ಐ.ಎಸ್. ಪೂಜಾರಿ, ಮಂಜುಳಾ ಕಾಪ್ಸೆ, ಎ.ಎಫ್. ರೇಶ್ಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.






