ನನ್ನ ಕರ್ತವ್ಯ ಮಾಡುತ್ತೇನೆ, ಉಳಿದದ್ದು ಪಕ್ಷ ತೀರ್ಮಾನ ಮಾಡುತ್ತದೆ : ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್
ಹುಬ್ಬಳ್ಳಿ : ‘ನಾನು ನನ್ನ ಕರ್ತವ್ಯವನ್ನು ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ’ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಗುರುಗಳು ಆಶೀರ್ವಾದ ಮಾಡುವ ವೇಳೆ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ ಮುಖ್ಯ. ಪಕ್ಷ ಏನು ತೀರ್ಮಾನ ಮಾಡುತ್ತದೋ, ಅದನ್ನು ನಾವು ಮಾಡುತ್ತೇವೆ ಎಂದರು.
‘ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ಪಕ್ಷಕ್ಕೆ ಹಾಗೂ ಸರಕಾರಕ್ಕೆ ಏನು ಕೆಲಸ ಮಾಡಬೇಕೋ ಅದನ್ನು ನಾನು ಮಾಡುತ್ತೇನೆ, ನಾನು ಆತುರದಲ್ಲಿಲ್ಲ’ ಎಂದು ಹೇಳಿದರು.
Next Story





