Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಲೋಕಸಭೆ ಚುನಾವಣೆ ಸ್ಪರ್ಧೆ ವಿಚಾರವಾಗಿ...

ಲೋಕಸಭೆ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಜಗದೀಶ್ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ14 March 2024 2:26 PM IST
share
ಲೋಕಸಭೆ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ, ಮಾ.14: ಲೋಕಸಭೆ ಚುನಾವಣೆಗೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ತಾನು ಬದ್ಧ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ವಿಚಾರವಾಗಿ ಧಾರವಾಡ, ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಬೇಡಿಕೆ ಇಟ್ಟಿದ್ದೆ. ಆದರೆ ಬೇರೆ ಬೇರೆ ಕಾರಣದಿಂದ ಅದು ಕೈತಪ್ಪಿದೆ. ಹೀಗಾಗಿ ಆ ವಿಚಾರವಾಗಿ ನಾನು ಹೆಚ್ಚು ಮಾತನಾಡುವುದಿಲ್ಲ. ಸದ್ಯ ಬೆಳಗಾವಿ ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚೆ ನಡೆದಿದೆ ಎಂದರು.

ಬೆಳಗಾವಿಯಲ್ಲಿ ಶೆಟ್ಟರ್ ಗೋ ಬ್ಯಾಕ್ ಅಭಿಯಾನದ ವಿಚಾರವಾಗಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪರಿಸ್ಥಿತಿ ಸರಿಯಿಲ್ಲ ಅಂತೇನಿಲ್ಲ. ಈ ಬಗ್ಗೆ ಪಕ್ಷದ ಬೆಳಗಾವಿ ಜಿಲ್ಲಾ ನಾಯಕರು, ಹೈಕಮಾಂಡ್ ನಾಯಕರ ಜತೆಗೆ ಚರ್ಚೆ ಮಾಡುತ್ತೇನೆ. ವಿ.ಸೋಮಣ್ಣ ಅವರಿಗೂ ತುಮಕೂರಿನಲ್ಲಿ ಮೊದಲು ವಿರೋಧ ವ್ಯಕ್ತವಾಗಿತ್ತು. ಟಿಕೆಟ್ ನೀಡಿದ ಬಳಿಕ ಎಲ್ಲ ಸರಿ ಹೋಗಿದೆ. ಅದರಂತೆ ಬೆಳಗಾವಿಯಲ್ಲೂ ಆಗಲಿದೆ ಎಂದು ತಿಳಿಸಿದರು.

ಇನ್ನು ಸದ್ಯ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ತಿರ್ಮಾನ ಆಗಿಲ್ಲ, ಇದೀಗ ಚರ್ಚೆ ಹಂತದಲ್ಲಿದೆ. ಯಡಿಯೂರಪ್ಪ, ವಿಜಯೇಂದ್ರ ಕೂಡಾ ಈ ಬಗ್ಗೆ ಮಾತನಾಡಿದ್ದಾರೆ. ನಾಲ್ಕು ಗೋಡೆ ಮಧ್ಯೆ ನಡೆದ ಚರ್ಚೆಗಳನ್ನು ಬಹಿರಂಗವಾಗಿ ತಿಳಿಸಲು ಅಗುವುದಿಲ್ಲ ಎಂದರು.

ಶೆಟ್ಟರ್ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂತು ರೂಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಅದನ್ನು ನಾನು ಮಾತನಾಡುವುದಿಲ್ಲ. ನಮ್ಮ ಬೆಂಬಲಿಗರು ಹೇಳತ್ತಾರೆ. ಅಷ್ಟೇ ಅಲ್ಲದೇ ಜನರಿಗೆ ಗೊತ್ತಿದೆ. ಅವರೇ ಪಾಠ ಕಲಿಸತ್ತಾರೆ ಎಂದು ಹೆಸರು ಹೇಳದೇ ಪರೋಕ್ಷವಾಗಿ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರಿದರು.

ಪ್ರಹ್ಲಾದ್ ಜೋಶಿ ಪರವಾಗಿ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ನಾನು ಪ್ರಚಾರ ಮಾಡುತ್ತೇನೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದು, ಅದರಂತೆ ಪಕ್ಷವನ್ನು ಗೆಲ್ಲಿಸಲು ಶ್ರಮಿಸಲಾಗುವುದು. ಈ ಬಾರಿಯೂ ಎಲ್ಲೆಡೆ ಮೋದಿ ಅಲೆಯಿಂದ ರಾಜ್ಯದ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಿಕೆಟ್ ವಿಚಾರವಾಗಿ ದಿಲ್ಲಿಗೆ ಹೋಗುವುದಿಲ್ಲ. ಬದಲಾಗಿ ಬೆಂಗಳೂರಿಗೆ ಹೋಗುವ ಸಾಧ್ಯತೆಯಿದೆ. ಖಂಡಿತವಾಗಿ ಈ ಬಾರಿ ಲೋಕಸಭಾ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಮುಂದಿನ ದಿನಗಳಲ್ಲಿ ಶೆಟ್ಟರ್ ಪಶ್ಚಾತ್ತಾಪ ಆಗಲಿದೆ ಕಾದು ನೋಡಿ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾನು ಕಾಂಗ್ರೆಸ್ ಹಾಗೂ ಬಿಜೆಪಿಗೆ ಹೋದಾಗ ಪಶ್ಚಾತ್ತಾಪ ಪಟ್ಟಿಲ್ಲ. ಬೇರೆಯವರಿಗೆ ಪಶ್ಚಾತ್ತಾಪ ಪಡಿಸುತ್ತೇನೆ. ಹಾಗಾಗಿ ನನಗೆ ಪಶ್ಚಾತ್ತಾಪ ಎಂಬುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X