Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಹುಬ್ಬಳ್ಳಿ | ಆರೆಸ್ಸೆಸ್ ನಿಷೇಧಿಸಲು...

ಹುಬ್ಬಳ್ಳಿ | ಆರೆಸ್ಸೆಸ್ ನಿಷೇಧಿಸಲು ಆಗ್ರಹಿಸಿ ಅರೆಬೆತ್ತಲೆ ಮೆರವಣಿಗೆ; ರಾಷ್ಟ್ರೀಯ ಅಹಿಂದ ಸಂಘಟನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ2 Nov 2025 8:45 PM IST
share
ಹುಬ್ಬಳ್ಳಿ | ಆರೆಸ್ಸೆಸ್ ನಿಷೇಧಿಸಲು ಆಗ್ರಹಿಸಿ ಅರೆಬೆತ್ತಲೆ ಮೆರವಣಿಗೆ; ರಾಷ್ಟ್ರೀಯ ಅಹಿಂದ ಸಂಘಟನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಹುಬ್ಬಳ್ಳಿ : ಆರೆಸ್ಸೆಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಅಹಿಂದ ಸಂಘಟನೆ ವತಿಯಿಂದ ರವಿವಾರ ಅಂಬೇಡ್ಕರ್ ವೃತ್ತದಿಂದ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.

ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಜೊತೆಗೆ ಸಂವಿಧಾನ ಪೀಠಿಕೆ ಓದುವುದರ ಮೂಲಕ ‘ಆರೆಸ್ಸೆಸ್ ಹಠಾವೋ, ಸಂವಿಧಾನ ಬಚಾವೋ’ ಅರೆಬೆತ್ತಲೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ರಾಷ್ಟ್ರೀಯ ಅಹಿಂದ ಸಂಘಟನೆಯ ನೂರಾರು ಕಾರ್ಯಕರ್ತರು ಮನುಸ್ಮೃತಿ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಚಿತ್ತಾಪುರ ಭೀಮ್‌ ಆರ್ಮಿ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸತೀಶ್ ಜಾರಕಿಹೊಳಿ ಬಗ್ಗೆ ಅವಹೇಳನಾಕಾರಿ ಮಾತನಾಡಿರುವ ಆರೆಸ್ಸೆಸ್ ಅನ್ನು ನಿಷೇಧಿಸುವಂತೆ ಒತ್ತಾಯಿಸಿದರು.

ಅಂಬೇಡ್ಕರ್ ವೃತದಿಂದ ಚನ್ನಮ್ಮ ಸರ್ಕಲ್‌ವರೆಗೆ ಅರಬೆತ್ತಲೆ ಮೆರವಣಿಗೆ ಹೊರಟಿದ್ದ ಧರಣಿನಿರತರನ್ನು ವಶಕ್ಕೆ ಪಡೆದ ಪೊಲೀಸರು, ಬಳಿಕ ಸಿ.ಆರ್. ಮೈದಾನದ ಸಮೀಪ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಅಹಿಂದ ರಾಷ್ಟ್ರೀಯ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ, ಯೂಸುಫ್ ಬಳ್ಳಾರಿ, ಬಾಬಾಜಾನ ಮುದೋಳ , ಬಾಳೇಶ ಮಣ್ಣೊಳ್ಳಿ, ರಾಜು ಮಾದರ, ಶಿವಮೊಗ್ಗ ಜಿಲ್ಲಾಧ್ಯಕ್ಷ ಜಯರಾಮ್ ಶೆಟ್ಟಿ, ರಾಯಚೂರು ಜಿಲ್ಲಾಧ್ಯಕ್ಷ ಶಿವಪ್ಪ ಪೂಜಾರ, ರಮೇಶ ಚಲವಾದಿ, ನಿಂಗಪ್ಪ ಪ್ಯಾಟಿ, ಪ್ರಕಾಶ ನಾಯಕ, ಜಯಶ್ರೀ ದೇಶಪಾಂಡೆ, ಪುಷ್ಪಾ ಹಿರೇಮಠ, ತನ್ವೀರ್ ಮುಳಗುಂದ, ರಾಜು ಸನದಿ ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಮಹಾತ್ಮಾ ಗಾಂಧೀಜಿ ಅವರನ್ನು ಕೋಲೆ ಮಾಡಿರುವ ಮತ್ತು ಭಾರತದ ಸಂವಿಧಾನವನ್ನು ಒಪ್ಪದ ಆರೆಸ್ಸೆಸ್ ಸಂಘಟನೆಯನ್ನೂ ತಕ್ಷಣವೇ ನಿಷೇಧಿಸಬೇಕು. ಈ ಸಂಘಟನೆ ಚಿಕ್ಕ ಮಕ್ಕಳಲ್ಲಿ ಜಾತಿ ವಿಷ ಬೀಜ ಬಿತ್ತುವುದರ ಜೊತೆಗೆ ದೇಶ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಾ ಬಂದಿದೆ. ಸ್ವಾತಂತ್ರ್ಯ ನಂತರದಲ್ಲಿ ನಮ್ಮ ದೇಶದ ಧ್ವಜವನ್ನು ವಿರೋಧಿಸಿರುವ ಈ ರಾಷ್ಟ್ರದ್ರೋಹಿ ಸಂಘಟನೆ ಇನ್ನೂ ನೋಂದಣಿಯಾಗದೆ ಸಂವಿಧಾನ ವಿರೋಧಿ ಎಂದು ಸಾಬೀತು ಮಾಡಿದೆ, ನಾವು ಮನುಸ್ಮೃತಿಯನ್ನು ರಸ್ತೆಯಲ್ಲಿ ಸುಡುವುದರ ಮೂಲಕ ವಿರೋಧಿಸುತ್ತೇವೆ.

ಮುತ್ತಣ್ಣ ಶಿವಳ್ಳಿ, ರಾಷ್ಟ್ರೀಯ ಅಹಿಂದ ಸಂಘಟನೆ ರಾಜ್ಯಾಧ್ಯಕ್ಷ

ರಾಜ್ಯದಲ್ಲಿ ಸಂವಿಧಾನ ಉಳಿವಿಗಾಗಿ ಹೋರಾಟ ಮಾಡುವ ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲದಂತಾಗಿದೆ. ಅಹಿಂದ ವರ್ಗದ ಪರವಾಗಿ ಇರುವ ಸರಕಾರ ಎನ್ನುವ ಹಣೆಪಟ್ಟಿ ಕಟ್ಟಿಕೊಂಡಿರುವ ಕಾಂಗ್ರೆಸ್ ಸರಕಾರದಲ್ಲಿ ಕೋಲು ಬಡಿಗೆಗಳನ್ನು ಹಿಡಿದುಕೊಂಡು ನಗರವನ್ನು ಸುತ್ತಾಡಲು ಪರವಾಣಿಗೆ ನೀಡಲಾಗುತ್ತಿದೆ. ನಾವು ಬಾಬಾಸಾಹೇಬರು ಬರೆದಿರುವ ಸಂವಿಧಾನದ ಪ್ರತಿಯನ್ನು ಓದಿಕೊಂಡು ಮೆರವಣಿಗೆ ಹೊರಟರೆ ನಮ್ಮನ್ನು ಬಂಧಿಸುತ್ತಾರೆ. ಇಂದು ಸಂವಿಧಾನದ ಆಶಯಗಳ ಕಗ್ಗೊಲೆ ಆಗುತ್ತಿದ್ದು, ಹುಬ್ಬಳ್ಳಿಯ ಪೊಲೀಸರು ಆರೆಸ್ಸೆಸ್ ಆಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಬಂಧಿಸಿದ ತಕ್ಷಣ ಅಹಿಂದ ಸಂಘಟನೆ ಹೋರಾಟವನ್ನು ದುರ್ಬಲ ಮಾಡಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಾವು ಉಗ್ರ ಹೋರಾಟ ಮಾಡಿ ಸಂವಿಧಾನದ ರಕ್ಷಣೆಗೆ ಕರೆ ನೀಡುತ್ತೇವೆ.

ಜೋಸೆಫ್ ಉದೋಜಿ, ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಉಪಾಧ್ಯಕ್ಷ, ವಕೀಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X