Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. Hubballi | ರಸ್ತೆ ನಿರ್ಮಾಣದ ಜಾಗದ...

Hubballi | ರಸ್ತೆ ನಿರ್ಮಾಣದ ಜಾಗದ ಕೆಳಗಡೆ ಪುಷ್ಕರಣಿ ಆರೋಪ; ಹಿಂದುತ್ವ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 Aug 2026 3:34 PM IST
share
Hubballi | ರಸ್ತೆ ನಿರ್ಮಾಣದ ಜಾಗದ ಕೆಳಗಡೆ ಪುಷ್ಕರಣಿ ಆರೋಪ; ಹಿಂದುತ್ವ ಸಂಘಟನೆಗಳಿಂದ ಪ್ರತಿಭಟನೆ
ಶಾಸಕ ಅರವಿಂದ ಬೆಲ್ಲದ್‌, ಮಹೇಶ ಟೆಂಗಿನಕಾಯಿ, ಪ್ರಮೋದ್ ಮುತಾಲಿಕ್ ಸಹಿತ ಹಲವರು ಪೊಲೀಸ್‌ ವಶಕ್ಕೆ

ಹುಬ್ಬಳ್ಳಿ : ಭವಾನಿ ಶಂಕರ ದೇವಾಲಯದ ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಿಸಿರುವುದಾಗಿ ಆರೋಪಿಸಿ, ಇದನ್ನು ವಿರೋಧಿಸಿ ಹಿಂದುತ್ವ ಸಂಘಟನೆಗಳು ಶನಿವಾರ ಹುಬ್ಬಳ್ಳಿಯ ಚನ್ನಪೇಟ ಗಾರ್ಡನ್ ಹತ್ತಿರ ಪ್ರತಿಭಟನೆ ನಡೆಸಿ, ಬಳಿಕ ವಿವಾದಿತ ಸ್ಥಳದತ್ತ ತೆರಳಲು ಕಾರ್ಯಕರ್ತರು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದ ಘಟನೆ ನಡೆದಿದೆ.

‘ಪುಷ್ಕರಣಿ ಉಳಿಸಿ, ಭವಾನಿ ಶಂಕರ ಕೀರ್ತಿ ಬೆಳಸಿ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾಕಾರರು ರಸ್ತೆ ಮಧ್ಯೆಯೇ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡಿದ್ದು, ಶಾಸಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಿದ್ದರು. ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಪುಷ್ಕರಣಿ ಜಾಗದಲ್ಲಿ ನಿರ್ಮಿಸಿರುವ ರಸ್ತೆಯನ್ನು ಕೂಡಲೇ ತೆರವುಗೊಳಿಸಿ, ಪುರಾತನ ದೇವಾಲಯದ ಪುಷ್ಕರಣಿ ಜಾಗವನ್ನು ಉತ್ಖನನ ಮಾಡಿ ಸಂರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿ, ʼರಸ್ತೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದೀಗ ಪ್ರತಿಭಟನೆ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ರಸ್ತೆ ನಿರ್ಮಿಸಲಾಗಿದೆʼ ಎಂದು ಆರೋಪಿಸಿದ ಅವರು, ರಸ್ತೆ ತೆರವುಗೊಳಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಶಾಸಕ ಅರವಿಂದ ಬೆಲ್ಲದ್‌ ಮಾತನಾಡಿ, ಭವಾನಿ ಶಂಕರ ದೇವಾಲಯ ಪುರಾತನ ದೇವಾಲಯವಾಗಿದ್ದು, ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಿಸಿರುವುದು ಸರಿಯಲ್ಲ. ಪಾಲಿಕೆ ಸದಸ್ಯರ ಒತ್ತಡಕ್ಕೆ ಮಣಿದು ಪಾಲಿಕೆ ಅಧಿಕಾರಿಗಳು ರಸ್ತೆ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ ಎಂದು ಆರೋಪಿಸಿದರು.

ಈ ಮಧ್ಯೆ, 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನಾಕಾರರು ವಿವಾದಿತ ಸ್ಥಳದತ್ತ ತೆರಳಲು ಮುಂದಾಗಿದ್ದು, ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಾಗ ನೂಕಾಟ, ತಳ್ಳಾಟ ನಡೆಯಿತು. ಬಳಿಕ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹಾಗೂ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆಯಲಾಯಿತು.

ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಮುಂದುವರಿಸಿದ್ದಾರೆ.

Tags

hubballi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X