Hubballi | ನಿಂತಿದ್ದ ಟ್ರ್ಯಾಕ್ಟರ್-ಕಾರಿಗೆ ಢಿಕ್ಕಿ ಹೊಡೆದ ಟ್ಯಾಂಕರ್; ಚಾಲಕರಿಗೆ ಗಾಯ

ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ : ಕಲಘಟಗಿ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಬುಡನಾಳ ಬಳಿ ಶುಕ್ರವಾರ ಸಂಜೆ ಎಥನಾಲ್ ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ವೊಂದು ನಿಂತಿದ್ದ ಟ್ರ್ಯಾಕ್ಟರ್ ಹಾಗೂ ಕಾರಿಗೆ ಢಿಕ್ಕಿ ಹೊಡೆದು ರಸ್ತೆ ಮಧ್ಯೆಯೇ ಪಲ್ಟಿಯಾದ ಘಟನೆ ಸಂಭವಿಸಿದೆ.
ರಭಸವಾಗಿ ಬಂದ ಟ್ಯಾಂಕರ್ ನಿಯಂತ್ರಣ ತಪ್ಪಿ ನಿಂತಿದ್ದ ಟ್ರ್ಯಾಕ್ಟರ್ ಮತ್ತು ಕಾರಿಗೆ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ. ವಾಹನಗಳ ಚಾಲಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Next Story




