Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ;...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ವಾರ್ತಾಭಾರತಿವಾರ್ತಾಭಾರತಿ7 Oct 2026 12:46 AM IST
share
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಹುಬ್ಬಳ್ಳಿ : ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಸೇವೆಯಿಂದ ಅಮಾನತುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹುಬ್ಬಳ್ಳಿ-ಧಾರವಾಡ ನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಧರಣಿ ನಡೆಸಲಾಯಿತು.

ಯುವ ಕಾಂಗ್ರೆಸ್ ಮುಖಂಡ ಅರ್ಜುನ ಪಾಟೀಲ ನೇತೃತ್ವದಲ್ಲಿ ಕಾರವಾರ ರಸ್ತೆಯ ಹು-ಧಾ. ಮಹಾನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರಕಾರ, ಪ್ರಧಾನಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗಿದರು. ಎಸ್‌ಐಆರ್ ಹೆಸರಲ್ಲಿ ಮತಕಳವು ನಡೆದಿರುವ ಕುರಿತು ಆರೋಪ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಈ ಕೂಡಲೇ ಜ್ಞಾನೇಶ ಕುಮಾರ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ನಂತರ ಕಾರವಾರ ರಸ್ತೆಯ ಹಳೆಯ ಸಿಆರ್‌ಎ ಮೈದಾನದಲ್ಲಿ ಅವರನ್ನು ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಕೇಂದ್ರ ಚುನಾವಣಾ ಆಯೋಗವು ಕೇಂದ್ರ ಸರಕಾರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪ ಮಾಡಿದರು. ಚುನಾವಣಾ ಆಯೋಗವು ಯಾವುದೇ ರಾಜಕೀಯ ಒತ್ತಡ ಅಥವಾ ಆಡಳಿತಾತ್ಮಕ ಪ್ರಭಾವಕ್ಕೆ ಒಳಗಾಗದೆ, ಸಂವಿಧಾನಬದ್ಧವಾಗಿ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಯುವಕರ ಧ್ವನಿಯನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ನಾವು ಪ್ರಜಾಸತ್ತಾತ್ಮಕವಾಗಿ ಪ್ರಶ್ನಿಸುತ್ತೇವೆ. ಮತಕಳವು ಪ್ರಕರಣವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಡಂಗನವರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮ ಬಳೋಗಿ, ಅರ್ಜುನ ಪಾಟೀಲ, ಅಬ್ದುಲ್ ದೇಸಾಯಿ, ರೆಹಾನ್ ಐನಾಪುರಿ, ಪ್ರಣವ ಗಾಯಕವಾಡ, ಕಾಸಿಮ್, ಸಾಜುದ್ದೀನ ವಾಚ್‌ಮೇಕರ್, ಅಕ್ಷಯ ಪಾಟೀಲ, ಶಾನವಾಜ್ ಖಾನ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

hubballi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X