Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. Hubballi | ಹಾಲಿನ ದರ ಏರಿಕೆ ಖಂಡಿಸಿ...

Hubballi | ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Nov 2026 2:48 PM IST
share
Hubballi | ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ನಗರದ ದುರ್ಗದ ಬೈಲ್‌ನಲ್ಲಿ ಚಹಾ ತಯಾರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದವಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಿಳಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಾಲಿನ ದರ ಏರಿಕೆಯಿಂದ ಸಾಮಾನ್ಯ ಕುಟುಂಬಗಳು, ಅದರಲ್ಲೂ ಮಕ್ಕಳಿಗೆ ಹಾಲು ನೀಡುವ ತಾಯಂದಿರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಈ ವೇಳೆ ಮಾತನಾಡಿದ ಸೀಮಾ ಲದವಾ, ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ ಹಾಲಿನ ದರ ಹೆಚ್ಚಳ ಮಾಡಿದೆ. ಇದರಿಂದ ಜನಸಾಮಾನ್ಯರ ಕುಟುಂಬದ ಬಜೆಟ್ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ. ಮಕ್ಕಳಿಗೆ ನಿತ್ಯ ನೀಡುವ ಹಾಲಿನ ದರವೂ ಹೆಚ್ಚಳವಾಗಿರುವುದರಿಂದ ತಾಯಂದಿರಾಗಿ ನಾವು ಬೀದಿಗಿಳಿದು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.

ಹಾಲು ಉತ್ಪಾದಕರಿಗೆ ಸರ್ಕಾರ ಪ್ರೋತ್ಸಾಹಧನ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಆ ಪ್ರೋತ್ಸಾಹಧನದ ಹೊರೆ ಗ್ರಾಹಕರ ಜೇಬಿಗೆ ಹಾಕುವುದು ಸರಿಯಲ್ಲ. ಸರ್ಕಾರ ತನ್ನ ಬೊಕ್ಕಸದಿಂದಲೇ ಪ್ರೋತ್ಸಾಹಧನ ನೀಡಬೇಕು. ಉಚಿತ ಯೋಜನೆಗಳನ್ನು ಜಾರಿಗೊಳಿಸುವ ಹೆಸರಿನಲ್ಲಿ ಜನರ ಜೇಬಿಗೆ ಕತ್ತರಿ ಹಾಕುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಬದಲಾಗಿ ದಿನಬಳಕೆಯ ವಸ್ತುಗಳು, ಹಾಲು ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಮಹಿಳೆಯರ ಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೇ ಅನ್ಯಾಯ ಮಾಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣವೂ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಆರೋಪಿಸಿದರು.

ಸರ್ಕಾರ ಕೂಡಲೇ ಹಾಲಿನ ದರ ಏರಿಕೆ ನಿರ್ಧಾರವನ್ನು ಹಿಂಪಡೆದು, ಹೆಚ್ಚಿಸಿರುವ ದರವನ್ನು ತಕ್ಷಣ ಇಳಿಸಬೇಕು. ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮಹಿಳಾ ಮೋರ್ಚಾ ವತಿಯಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಶೀಲಾ ಕಾಟಕರ, ಪೂಜಾ ಶೇಜವಾಡಕರ, ಉಮಾ ಮುಕುಂದ, ರೂಪಾ ಶೆಟ್ಟಿ, ಪ್ರೀತಿ ಲದ್ವಾ, ಶಾಂತಾ ಹಿರೇಮಠ, ರಾಧಾಬಾಯಿ ಸಫಾರೆ, ಸುಮಿತ್ರಾ ಗುಂಜಾಳ, ಪೂಜಾ ರಾಯ್ಕರ, ಅನುರಾಧಾ ಚಿಲ್ಲಾಳ, ಪ್ರತಿಭಾ ಪವಾರ, ಶಾಂತಕ್ಕ ಪಂಚಾಂಗಮಠ, ಅಕ್ಕಮಹಾದೇವಿ ಹೆಗಡೆ, ಸುಮಾ ಶಿವನಗೌಡರ, ವಿಜಯ ಗುಡಿಗೇರಿ, ಮೇನಕಾ ಹುರಳಿ, ಗೀತಾ ದೇಸಳ್ಳಿ, ವಿಜಯಲಕ್ಷ್ಮಿ ತಿಮ್ಮೊಳಿ, ಲಕ್ಷ್ಮಿ ದೊಡ್ಮನಿ, ಸವಿತಾ ಅಥಣಿ, ಲಕ್ಷ್ಮಿ ಮಿಸ್ಕಿನ್ ಹಾಗೂ ಜಯಶ್ರೀ ಮುಳುಗುಂದಮಠ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Tags

ProtestsMahila MorchaBJPhubballi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X