Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಹುಬ್ಬಳ್ಳಿ: ಮನೆ ಹಸ್ತಾಂತರ ಕಾರ್ಯಕ್ರಮದ...

ಹುಬ್ಬಳ್ಳಿ: ಮನೆ ಹಸ್ತಾಂತರ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಕಟೌಟ್; ಮಹಿಳೆ ಸೇರಿ ಮೂವರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ24 Jan 2026 11:56 AM IST
share
ಹುಬ್ಬಳ್ಳಿ: ಮನೆ ಹಸ್ತಾಂತರ ಕಾರ್ಯಕ್ರಮದ ವೇಳೆ ಕುಸಿದು ಬಿದ್ದ ಕಟೌಟ್; ಮಹಿಳೆ ಸೇರಿ ಮೂವರಿಗೆ ಗಾಯ

ಹುಬ್ಬಳ್ಳಿ: ನಗರದ ಮಂಟೂರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ಇಲಾಖೆಯ ಸಹಯೋಗದಲ್ಲಿ ಇಂದು ಮನೆ ಹಂಚಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕಾಗಿ ಅಳವಡಿಸಿದ್ದ ಬೃಹತ್ ಕಟೌಟ್ ಬಿದ್ದು ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.

ಗಾಯಗೊಂಡವರು ಕಟೌಟ್ ಅಳವಡಿಸುವ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಾದ ಬ್ಯಾಹಟ್ಟಿ ಗ್ರಾಮದ ನಿವಾಸಿಗಳಾದ ಶಂಕರ್ ಹಡಪದ (32) ಮತ್ತು ಮಂಜುನಾಥ ವರ್ಣೇಕರ್ (33) ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗಂಗಾಧರ ನಗರದ ನಿವಾಸಿ ಶಾಂತಾ (60)ಅವರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.

ಗಾಯಗೊಂಡ ಮೂವರಲ್ಲಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತೊಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್ ಪಕ್ಷದ ವತಿಯಿಂದ ಮಂಟೂರ ರಸ್ತೆಯ ಎರಡೂ ಬದಿಗಳಲ್ಲಿ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಮಲ್ಲಿಕಾರ್ಜುನ ಖರ್ಗೆ ಅವರ ಕಟೌಟ್‌ ನಂತರ, ಮುಖ್ಯಮಂತ್ರಿ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಫೋಟೋಗಳಿದ್ದ ಎರಡು ಕಟೌಟ್‌ಗಳು ಒಂದರ ಮೇಲೆ ಒಂದು ಬಿದ್ದು, ಅವುಗಳ ಕೆಳಗಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಟೌಟ್‌ಗಳು ಸುಮಾರು 30–35 ಅಡಿ ಎತ್ತರವಾಗಿದ್ದು, ಅವುಗಳಿಗೆ ಆಧಾರವಾಗಿ ಕಟ್ಟಿಗೆಗಳನ್ನು ಅಳವಡಿಸಲಾಗಿತ್ತು. ಕಟೌಟ್ ಬಿದ್ದ ವೇಳೆ ಕಟ್ಟಿಗೆಗಳು ದೇಹಕ್ಕೆ ಚುಚ್ಚಿ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಟೌಟ್ ಬಿದ್ದ ಸ್ಥಳದಿಂದ ಕೇವಲ ಕೆಲವೇ ಅಡಿಗಳ ದೂರದಲ್ಲಿ ಹತ್ತಕ್ಕೂ ಹೆಚ್ಚು ಪೊಲೀಸರು ನಿಂತಿದ್ದರು. ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಭದ್ರತೆ ಹಾಗೂ ಕಾರ್ಯಕ್ರಮದ ಆಯೋಜನೆಯಲ್ಲಿ ನಡೆದ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ. ಕುಸಿದ ಕಟೌಟ್ ಅನ್ನು ತೆರವುಗೊಳಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾರ್ಯಕ್ರಮ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X