ಹುಬ್ಬಳ್ಳಿ: ಖಾಸಗಿ ಹೋಟೆಲ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ–ಸಿದ್ದರಾಮಯ್ಯ ಭೇಟಿ

ಹುಬ್ಬಳ್ಳಿ: ವಸತಿ ಇಲಾಖೆಯ ಆಯೋಜನೆಯಲ್ಲಿ ನಡೆಯುತ್ತಿರುವ ಐತಿಹಾಸಿಕ 42,345 ಮನೆಗಳ ವಿತರಣಾ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಧಾರವಾಡ ಜಿಲ್ಲಾಡಳಿತದಿಂದ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ನಂತರ, ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲಿನಲ್ಲಿ ಭೇಟಿ ಮಾಡಿ, ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಜಮೀರ್ ಅಹಮದ್ ಖಾನ್, ಮಾಜಿ ಸಚಿವ ನಾಗೇಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
Next Story







