Hubballi | ಕತ್ತಿ ಹಿಡಿದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ಬಂಧನ

ಹುಬ್ಬಳ್ಳಿ: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಕೈಯಲ್ಲಿ ಕತ್ತಿಯನ್ನು ಹಿಡಿದುಕೊಂಡು ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ನಡೆದಿದೆ.
ಸ್ಥಳೀಯ ನಿವಾಸಿ ಗಂಗಾಧರ ಆನಂದ ಮಡಿವಾಳರ ಎಂಬಾತ ಹಳೆಹುಬ್ಬಳ್ಳಿಯ ಈಶ್ವರ ನಗರದ 4ನೇ ಕ್ರಾಸ್‌ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭಯದ ವಾತಾವರಣ ಉಂಟು ಮಾಡುವ ರೀತಿಯಲ್ಲಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ. ಈ ವೀಡಿಯೋವನ್ನು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಆತ ಫೋಸ್ಟ್ ಮಾಡಿದ್ದ.
ಆರೋಪಿಯನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಕತ್ತಿಯನ್ನು ವಶಕ್ಕೆ ಪಡೆಯಲಾಗಿದೆ.
ನಗರದ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story




