ಹುಬ್ಬಳ್ಳಿ | ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮೆಟ್ರೋ ಕಾಂಪ್ಲೆಕ್ಸ್; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಇಡೀ ಕಾಂಪ್ಲೆಕ್ಸ್ ಹೊತ್ತಿ ಉರಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ತಡರಾತ್ರಿ ನಡೆದಿದೆ.
ಮರಾಠಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾಂಪ್ಲೆಕ್ಸ್‌ಗೆ ವ್ಯಾಪಿಸಿದ್ದು, ಸ್ಥಳೀಯರು ಗಾಬರಿಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಟ್ಟರು. ಆದಾಗ್ಯೂ, ಕಾಂಪ್ಲೆಕ್ಸ್‌ನೊಳಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ತಿಳಿದು ಬಂದಿದೆ.
ಘಟನೆ ಹುಬ್ಬಳ್ಳಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
Next Story





