Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಹುಬ್ಬಳ್ಳಿ | ಮಹಿಳೆ ವಿವಸ್ತ್ರಗೊಳಿಸಿ...

ಹುಬ್ಬಳ್ಳಿ | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ: ಪೊಲೀಸ್ ಆಯುಕ್ತರು ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ7 Jan 2026 2:46 PM IST
share
ಹುಬ್ಬಳ್ಳಿ | ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಆರೋಪ: ಪೊಲೀಸ್ ಆಯುಕ್ತರು ಹೇಳಿದ್ದೇನು ?
"ತಾನೇ ಬಟ್ಟೆ ಬಿಚ್ಚಿಕೊಂಡು ಪೊಲೀಸರ ಮೇಲೆ ಸುಳ್ಳು ಆರೋಪ"

ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯನ್ನು ಅರೆಬೆತ್ತಲೆಯ ಸ್ಥಿತಿಯಲ್ಲಿ ಪೊಲೀಸ್ ವಾಹನದೊಳಗೆ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳು ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಬಗ್ಗೆ ವರದಿಯಾಗಿದೆ.

ವೈರಲ್ ವಿಡಿಯೋದಲ್ಲಿ ಕಾಣಿಸಿಕೊಳ್ಳುವ ಮಹಿಳೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಅಲಿಯಾಸ್ ವಿಜಯಲಕ್ಷ್ಮಿ ಹಂಡಿ ಎಂದು ಗುರುತಿಸಲಾಗಿದ್ದು, ಈ ವಿಡಿಯೋವನ್ನು ಆಕೆಯ ಕುಟುಂಬದ ಸದಸ್ಯರೊಬ್ಬರು ಚಿತ್ರೀಕರಿಸಿ ಹೊರಗೆ ಹರಿಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ–ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ಮಹಿಳೆಯನ್ನು ಪೊಲೀಸರು ವಿವಸ್ತ್ರಗೊಳಿಸಿಲ್ಲ; ತಾನಾಗಿಯೇ ಬಟ್ಟೆ ಬಿಚ್ಚಿಕೊಂಡು ಪೊಲೀಸರ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಏನಿದು ಘಟನೆ?

ಕಳೆದ ಜನವರಿ 1ರಂದು ಚಾಲುಕ್ಯ ನಗರದಲ್ಲಿ ಮತದಾರರ ವಿಶೇಷ ಪರಿಷ್ಕರಣೆ (SIR) ಕಾರ್ಯ ನಡೆಯುವ ವೇಳೆ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿತ್ತು. ಈ ವೇಳೆ ಅಧಿಕಾರಿಗಳೊಂದಿಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಹಾಗೂ ಕಾಂಗ್ರೆಸ್ ಕಾರ್ಪೋರೇಟರ್ಗಳು ಮತ್ತು ಬೆಂಬಲಿಗರ ನಡುವೆ ತೀವ್ರ ವಾಗ್ವಾದ ನಡೆದಿತ್ತು ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಎಂಬವರು ಸುಜಾತಾ ಹಂಡಿ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಜನವರಿ 5ರಂದು ಸುಜಾತಾ ಹಂಡಿಯನ್ನು ಬಂಧಿಸಲು ಪೊಲೀಸ್ ಸಿಬ್ಬಂದಿ ತೆರಳಿದ್ದರು. ಬಂಧನದ ವೇಳೆ ಆಕೆ ಬಟ್ಟೆ ಧರಿಸಿದ್ದರೂ, ಪೊಲೀಸ್ ವಾಹನದೊಳಗೆ ಹತ್ತಿಸಿದ ಬಳಿಕ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪ

ಬಂಧನದ ಸಂದರ್ಭದಲ್ಲಿ ಸುಜಾತಾ ಹಂಡಿ ನಾಲ್ವರು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದು, ಬಾಯಿಯಿಂದ ಕಚ್ಚಿರುವ ಘಟನೆ ಕೂಡ ನಡೆದಿದೆ ಎಂದು ಆಯುಕ್ತರು ತಿಳಿಸಿದ್ದಾರೆ. ಆದರೂ ಮಹಿಳಾ ಪೊಲೀಸ್ ಸಿಬ್ಬಂದಿ ಸಂಯಮ ತೋರಿ ಆಕೆಗೆ ಬಟ್ಟೆ ತೊಡಿಸಿ ಕರ್ತವ್ಯ ನಿರ್ವಹಿಸಿ ಬಂಧಿಸಿ ಕರೆತಂದಿದ್ದಾರೆ ಎಂದರು.

ಈ ಪ್ರಕರಣದಲ್ಲಿ ಸುಜಾತಾ ಹಂಡಿ ವಿರುದ್ಧ ಗಂಭೀರ ಸ್ವರೂಪದ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, ಈ ವರ್ಷದಲ್ಲೇ ಇತರ ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಪೊಲೀಸ್ ಆಯುಕ್ತರ ಹೇಳಿಕೆ

“ಸುಜಾತಾ ಹಂಡಿ ವಿರುದ್ಧ ಗಂಭೀರ ಆರೋಪಗಳಿರುವ ಹಿನ್ನೆಲೆ ಹೆಚ್ಚಿನ ಪೊಲೀಸ್ ಹಾಗೂ ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಹೋಗಲಾಗಿತ್ತು. ವಶಕ್ಕೆ ಪಡೆದ ನಂತರ ಆಕೆಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ. ಪೊಲೀಸ್ ಸಿಬ್ಬಂದಿಯನ್ನು ಬಾಯಿಯಿಂದ ಕಚ್ಚಿ ಹಲ್ಲೆ ಕೂಡ ನಡೆಸಲಾಗಿದೆ. ಆದರೂ ನಮ್ಮ ಸಿಬ್ಬಂದಿಯೇ ಬೇರೆ ಬಟ್ಟೆ ತಂದು ಆಕೆಯ ಮಾನ ರಕ್ಷಿಸಿದ್ದಾರೆ. ಮಹಿಳೆಯನ್ನು ವಿವಸ್ತ್ರಗೊಳಿಸಿದ ಆರೋಪ ಸಂಪೂರ್ಣ ಸುಳ್ಳು.”

-ಎನ್. ಶಶಿಕುಮಾರ್, ಹುಬ್ಬಳ್ಳಿ–ಧಾರವಾಡ ನಗರ ಪೊಲೀಸ್ ಆಯುಕ್ತ

ತನಿಖೆ ಮತ್ತು ಕ್ರಮ

ಈ ಘಟನೆಯ ಕುರಿತು ಡಿಸಿಪಿ ಮಟ್ಟದ ತನಿಖೆಗೆ ಸೂಚನೆ ನೀಡಲಾಗಿದೆ. ಜೊತೆಗೆ ಪ್ರಕರಣದ ವಿಡಿಯೋವನ್ನು ವೈರಲ್ ಮಾಡಿದ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಪ್ರಸ್ತುತ ಸುಜಾತಾ ಹಂಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X