Hubballi | ಯುವಕ ಆತ್ಮಹತ್ಯೆ

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದ ಬಳಿಯಿರುವ ಪಾರ್ಚೂನ ಹೊಟೇಲ್ ಮಾಲಕರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕುಲ ರಸ್ತೆಯಲ್ಲಿರುವ ಮನೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಚಂದ್ರು ಅಲಿಯಾಸ್ ಆದಿತ್ಯ ದಂಡಗಿ ಎಂದು ಗುರುತಿಸಲಾಗಿದೆ.
ಗೋಕುಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಸಂಪೂರ್ಣ ವಿವರ ತನಿಖೆಯ ಬಳಿಕ ಹೊರಬರಬೇಕಿದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story




