ಹುಬ್ಬಳ್ಳಿ | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಹುಬ್ಬಳ್ಳಿ : ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಗುರುವಾರ ತಡ ರಾತ್ರಿ ಯುವಕರ ಗುಂಪೊಂದು ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಮಲ್ಲಿಕ್ ಜಾನ್ ಅಹ್ಮದ್ (27) ಎಂದು ತಿಳಿದು ಬಂದಿದೆ.
ದುಷ್ಕರ್ಮಿಗಳ ಗುಂಪು ಮಲ್ಲಿಕ್ ಜಾನ್ ನನ್ನು ಚಾಕುವಿನಿಂದ ಇರಿದಿದ್ದಾರೆ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದ ಅವರನ್ನು ಕೆಎಂಸಿಆರ್ ಗೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಹೆಚ್ಚಿನ ರಕ್ತಸ್ರಾವ ಹಾಗು ತೀವ್ರವಾದ ಚಾಕು ಇರಿತದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮಲ್ಲಿಕ್ ಜಾನ್ ಮೃತಪಟ್ಟಿದ್ದಾನೆ.
ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಯಿತು. ಈ ಕೊಲೆ ಖಂಡಿಸಿ ಕೆ.ಇ.ಬಿ. ಕಚೇರಿ ಬಳಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು. ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆದಿದ್ದ ಘಟನೆಗೆ ಬೆಂಡಿಗೇರಿ ಪೊಲೀಸರ ನಿರ್ಲಕ್ಷ್ಯತನವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದರು.
Next Story





