Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಹುಬ್ಬಳ್ಳಿ : ಗ್ಯಾಂಗ್‌ ವಾರ್‌ ಪ್ರಕರಣ; ...

ಹುಬ್ಬಳ್ಳಿ : ಗ್ಯಾಂಗ್‌ ವಾರ್‌ ಪ್ರಕರಣ; ರೌಡಿ ಶೀಟರ್ ಕಾಲಿಗೆ ‌ ಗುಂಡು ಹಾರಿಸಿ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Aug 2024 2:28 PM IST
share
ಹುಬ್ಬಳ್ಳಿ : ಗ್ಯಾಂಗ್‌ ವಾರ್‌ ಪ್ರಕರಣ;  ರೌಡಿ ಶೀಟರ್ ಕಾಲಿಗೆ ‌ ಗುಂಡು ಹಾರಿಸಿ ಬಂಧನ

ಹುಬ್ಬಳ್ಳಿ : ರೌಡಿ ಶೀಟರೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ರವಿವಾರ ತಡರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯ ಬುಡರಸಿಂಗಿ ರಸ್ತೆಯಲ್ಲಿ ನಡೆದಿದೆ.

ರೌಡಿಶೀಟರ್ ಅಫ್ತಾಬ್ ಕರಡಿಗುಡ್ಡ ಪೊಲೀಸರಿಂದ ಗುಂಡೇಟು ತಿಂದಿದ್ದ ಆರೋಪಿ.‌ ಗ್ಯಾಂಗವಾರ್ ಪ್ರಕರಣಕ್ಕೆ ಸಂಬಂಧಿಸಿ‌ ಬಂಧನ‌ಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯು ತಪ್ಪಿಸಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ.

ಕಳೆದ ಭಾನುವಾರದಂದು ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ ವಾರ್‌ನಲ್ಲಿ ಜಾವೂರ್ ಎಂಬಾತ ಗಾಯ‌ಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕಸಬಾ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರು ತಂಡ ತೆರಳಿತ್ತು. ಆದರೆ ಈ ವೇಳೆ ಅಫ್ತಾಬ್ ಪೊಲೀಸ್ ಸಿಬ್ಬಂದಿಗಳಾದ ರಾಜು ರಾಠೋಡ್ ಮತ್ತು ಪಾಲಯ್ಯ ಮೇಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಕೂಡಲೇ ಅಲರ್ಟ್ ಆದ ಇನ್ಸ್ಪೆಕ್ಟರ್ ರಾಘವೇಂದ್ರ ಅವರು ಅಪ್ತಾಬ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗಾಯಾಳು ಆರೋಪಿ ಸೇರಿ ಪೋಲೀಸ ಸಿಬ್ಬಂದಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಹುಬ್ಬಳ್ಳಿ ಧಾರವಾಡ ಕಮಿಷನರ್ ಎನ್ ಶಶಿಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಸಿಬ್ಬಂದಿ ಆರೋಗ್ಯ ವಿಚಾರಿಸಿದರು.

ಬಳಿಕ‌ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಕಸಬಾ ಪೊಲೀಸ ಠಾಣೆ ವ್ಯಾಪ್ತಿಯ ಸದರ್ ಸೋಫಾ ಬ್ಯಾಹಟಿ ಪಾರ್ಕ ಬಳಿ ಭಾನುವಾರ ಎರಡು ಗುಂಪುಗಳ ಮದ್ಯ ಗಲಾಟೆ ನಡೆದು‌ ಜಾವೂರ್ ಎಂಬಾತನಿಗೆ ಗಂಭೀರ ಗಾಯವಾಗಿತ್ತು. ಇದರಲ್ಲಿ ಜಾವೂರ್ ಟೀಂ ಮತ್ತೊಂದು ಟೀಂನ ಮೇಲೆ ಹಲ್ಲೆಗೆ ಮುಂದಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ಕೌಂಟರ್ ದೂರು ನೀಡಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಏಳು ಜನರನ್ನು ರಾತ್ರಿಯೇ ಬಂಧನ ಮಾಡಲಾಗಿದೆ. ಆರೋಪಿ ಅಫ್ತಾಬ್ ಬುಡರಸಿಂಗಿ ಬಳಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ತಪಿಸಿಕೊಳ್ಳಲು ಮುಂದಾಗಿದ್ದ ಸಂದರ್ಭದಲ್ಲಿ ನಮ್ಮ ಠಾಣೆ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಈಗ ಪ್ರಕರಣದ ತನಿಖೆ ಇನ್ನೂ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ‌

ಬಡ್ಡಿ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಮೀಟರ್ ಬಡ್ಡಿ ವಸೂಲಿ ಮಾಡಲು ವಿದ್ಯಾರ್ಥಿಗಳು‌ ಹಾಗೂ ಅಪ್ರಾಪ್ತರನ್ನು ಬಳಸಿಕೊಳ್ಳಲಾಗುತ್ತಿರುವ ಅಂಶ ಬೆಳಕಿಗೆ ಬಂದಿದೆ. ಈ ಬಗ್ಗೆಯೂ ಕೂಡ ತನಿಖೆ ನಡೆಸಲಾಗುತ್ತಿದೆ. ಯಾರು ಬಡ್ಡಿ ಕೊಡುತ್ತಾರೆ ಎಂಬ ಬಗ್ಗೆ ತನಿಖೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು.

ಬೈಟ್- ಎನ್ ಶಶಿಕುಮಾರ್, ಹು-ಧಾ ಪೊಲೀಸ್ ಕಮಿಷನರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X