Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಹುಬ್ಬಳ್ಳಿ: ನವಜಾತ ಶಿಶುವಿನೊಳಗೆ ಭ್ರೂಣ...

ಹುಬ್ಬಳ್ಳಿ: ನವಜಾತ ಶಿಶುವಿನೊಳಗೆ ಭ್ರೂಣ ಪತ್ತೆ !

ವಾರ್ತಾಭಾರತಿವಾರ್ತಾಭಾರತಿ3 Oct 2025 11:19 PM IST
share
ಹುಬ್ಬಳ್ಳಿ: ನವಜಾತ ಶಿಶುವಿನೊಳಗೆ ಭ್ರೂಣ ಪತ್ತೆ !

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಕೆಎಂಸಿ ಆರ್ಐ) ಮಗುವೊಂದು ವಾರದ ಹಿಂದೆ ಜನಿಸಿದೆ. ಆ ಜನಿಸಿದ ಮಗುವಿನೊಳಗೊಂದು ಭ್ರೂಣ (ಫೆಟಸ್ ಇನ್ ಫೇಟು) ಇರುವುದು ಪತ್ತೆಯಾಗಿದೆ.

ಕುಂದಗೋಳದ ಗರ್ಭಿಣಿಯೊಬ್ಬರು ಎರಡನೇ ಹೆರಿಗೆಗೆಂದು ಕೆಎಂಸಿಆರ್‌ಐ ನ ತಾಯಿ ಮತ್ತು ಮಕ್ಕಳ ವಿಭಾಗದಲ್ಲಿ ದಾಖಲಾಗಿದ್ದು, ಸೆ.23ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗು ಆರೋಗ್ಯವಾಗಿದೆ. ಆದರೆ, ಆ ಮಗುವಿನೊಳಗೊಂದು ಭ್ರೂಣ ಇರುವುದನ್ನು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಕರು ಪತ್ತೆ ಮಾಡಿದ್ದಾರೆ. ಮೊದಲು ಆಲ್ಟ್ರಾಸೌಂಡ್ ಮಾಡಿಸಲಾಗಿತ್ತು. ಮಗುವಿನ ಹೊಟ್ಟೆಯಲ್ಲಿ ಬೆನ್ನುಹುರಿ ಇರುವ ಪಿಂಡ ಪತ್ತೆಯಾಗಿದೆ. ಆದರೂ MRI ಸ್ಕಾನ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ತಪಾಸಣೆ ವರದಿ ಬಂದ ನಂತರ ಮುಂದಿನ ಕ್ರಮದ ಕುರಿತು ನಿರ್ಧರಿಸಲಾಗುವುದು. ಇದೊಂದು ಅಪರೂಪದ ಪ್ರಕರಣ ಎಂದು ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ ತಿಳಿಸಿದ್ದಾರೆ.

ಫೆಟಸ್ ಇನ್ ಫೆಟು ಎಂದರೇನು?:

ನವಜಾತ ಶಿಶುವಿನ ದೇಹದೊಳಗೆ ಅಸಹಜ ದ್ರವ್ಯರಾಶಿ ಬೆಳೆಯುವ ಅಪರೂಪದ ಸ್ಥಿತಿಯಾಗಿದೆ. ಈ ಭಾಗಶಃ ರೂಪುಗೊಂಡ ದ್ರವ್ಯರಾಶಿ ತಲೆಬುರುಡೆ, ಸ್ಯಾಕ್ರಮ್ (ಬೆನ್ನುಮೂಳೆಯ ಬುಡದಲ್ಲಿರುವ ತ್ರಿಕೋನ ಮೂಳೆ) ಅಥವಾ ಬಾಯಿಯ ಒಳಭಾಗದಂತಹ ಅಸಾಮಾನ್ಯ ಸ್ಥಳಗಳಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ, ಇದು ಬೆನ್ನುಮೂಳೆಯ ಕಾಲಮ್, ಅಂಗ ಮೊಗ್ಗುಗಳು ಅಥವಾ ಮೂಲ ಅಂಗಗಳಂತಹ ಲಕ್ಷಣಗಳನ್ನು ತೋರಿಸಬಹುದು. ಆದರೆ, ಇವು ಎಂದಿಗೂ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿಲ್ಲ ಅಥವಾ ಕಾರ್ಯ ನಿರ್ವಹಿಸುವುದಿಲ್ಲ.

ಇನ್ನು ಮಗುವಿನೊಳಗೆ ಭ್ರೂಣ ಪ್ರಕರಣಗಳು ಅತ್ಯಂತ ವಿರಳವಾಗಿದೆ. ಜಗತ್ತಿನಾದ್ಯಂತ ಕೇವಲ ಬೆರಳಣಿಕೆ ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು, ಇದು ವೈದ್ಯ ಲೋಕಕ್ಕೆ ಸವಾಲಾಗಿದೆ. ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಅವಿಷ್ಕಾರ ಹಾಗೂ ತಂತ್ರಜ್ಞಾನದಿಂದಲೂ ಮಗು ಜನನಕ್ಕೂ ಮುನ್ನ ಪತ್ತೆ ಹಚ್ಚಲಾಗಿಲ್ಲ ಎಂಬುದು ಗಮನಾರ್ಹವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X