Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಕನ್ನಡ ನಮ್ಮ ಅಭಿಮಾನದ ಸಂಕೇತ : ಸಚಿವ...

ಕನ್ನಡ ನಮ್ಮ ಅಭಿಮಾನದ ಸಂಕೇತ : ಸಚಿವ ಸಂತೋಷ ಲಾಡ್

ಜಿಲ್ಲಾಡಳಿತದಿಂದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Nov 2026 1:56 PM IST
share
ಕನ್ನಡ ನಮ್ಮ ಅಭಿಮಾನದ ಸಂಕೇತ : ಸಚಿವ ಸಂತೋಷ ಲಾಡ್

ಧಾರವಾಡ: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನವಿದೆ. ಪಂಪನ ಕಾವ್ಯ, ವಚನಕಾರರ ವಚನಗಳು, ದಾಸರ ಪದಗಳು, ಸರ್ವಜ್ಞನ ನುಡಿಗಳು, ಕುವೆಂಪು ಅವರ ವಿಶ್ವಮಾನವ ಸಂದೇಶ, ಡಿ.ವಿ.ಜಿ. ಸೇರಿದಂತೆ ಹಲವು ಚಿಂತಕರ ವಿಚಾರಗಳು ಕನ್ನಡ ಭಾಷೆಯ ವಿಶಾಲತೆಯನ್ನು ಸಾರುತ್ತವೆ ಎಂದು ಕಾರ್ಮಿಕ ಮತ್ತು ಉದ್ಯೋಗ ಖಾತೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಹೇಳಿದರು.

ರವಿವಾರ ಜಿಲ್ಲಾಡಳಿತದ ವತಿಯಿಂದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಜಿಲ್ಲೆಯ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಧಾರವಾಡ ಜಿಲ್ಲೆಯವರಾದ ಸಂಗೀತ ದಿಗ್ಗಜರಾದ ಪಂಡಿತ್ ಭೀಮಸೇನ ಜೋಶಿ, ವರಕವಿ ದ.ರಾ. ಬೇಂದ್ರೆ, ಚನ್ನವೀರ ಕಣವಿ, ಮಲ್ಲಿಕಾರ್ಜುನ ಮನ್ಸೂರ್ ಅವರಂತಹ ಮಹಾನ್ ಸಾಧಕರು ನಾಡಿನ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಬೆಳಗಿಸಿದ್ದಾರೆ. ಕನ್ನಡವನ್ನು ಕೇವಲ ಆಡಳಿತದಲ್ಲಿ ಬಳಸುವುದಷ್ಟೇ ಅಲ್ಲದೆ, ನಮ್ಮ ದಿನನಿತ್ಯದ ಬದುಕಿನಲ್ಲಿ, ಮನೆಗಳಲ್ಲಿ ಮತ್ತು ವ್ಯವಹಾರಗಳಲ್ಲಿ ಹೆಚ್ಚು ಹೆಚ್ಚು ಬಳಸಬೇಕು. ಕನ್ನಡ ಕೇವಲ ಮಾತನಾಡುವ ಭಾಷೆಯಲ್ಲ; ಅದು ನಮ್ಮ ಅಭಿಮಾನದ ಸಂಕೇತವಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಭಾರತ್ ಜೋಡೋ ಯುವ ಸಂಘ ಮಿಷನ್ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 249 ಯುವ ಸಂಘಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ. ರೈತ ಮಿತ್ರ, ನೇಗಿಲ ಯೋಗಿ, ತೇಗದ ಸಿರಿ ಹಾಗೂ ಗ್ರಾಮ ಅನುಭವ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಉದ್ಯೋಗ ನಿಧಿ, ಯುವ ಉದ್ಯೋಗ ಸೇತು ಮತ್ತು ಭೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗಿದೆ. ನಾಗರಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡಲು ಸರ್ಕಾರವು ಹೊಸದಾಗಿ ‘ಪ್ರಜಾ ಸೇವೆ ಇಲಾಖೆ’ಯನ್ನು ಆರಂಭಿಸಿದೆ. ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ಹಾಗೂ ಅನಿವಾಸಿ ಭಾರತೀಯರ ಸಮಸ್ಯೆಗಳನ್ನು ಪರಿಹರಿಸಲು ಜಾಗತಿಕ ಹೂಡಿಕೆ ಮತ್ತು ಅನಿವಾಸಿ ಭಾರತೀಯರ ವ್ಯವಹಾರಗಳ ಇಲಾಖೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಖಾಲಿ ಇರುವ 72 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಕರ್ನಾಟಕವನ್ನು ನಶಾಮುಕ್ತ ರಾಜ್ಯವನ್ನಾಗಿಸಲಾಗುವುದು. ವಸತಿರಹಿತರಿಗೆ ಉಚಿತ ಮನೆ ಮತ್ತು ನಿವೇಶನ ಹಂಚಿಕೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಯುವಜನರ ಸಬಲೀಕರಣ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 45 ಕೋಟಿ ಮಹಿಳಾ ಪ್ರಯಾಣಿಕರಿಗೆ 995 ಕೋಟಿ ರೂ. ಮೌಲ್ಯದ ಉಚಿತ ಪ್ರಯಾಣ ಸೇವೆ ಒದಗಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 4,04,827 ಮಹಿಳೆಯರಿಗೆ 2,345 ಕೋಟಿ ರೂ. ನೆರವು ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 5,21,046 ಕುಟುಂಬಗಳಿಗೆ 846 ಕೋಟಿ ರೂ. ಸಹಾಯಧನ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 3,75,996 ಬಿಪಿಎಲ್ ಕುಟುಂಬಗಳಿಗೆ ಉಚಿತ ಪಡಿತರ ಒದಗಿಸಲಾಗಿದೆ. ಯುವನಿಧಿ ಯೋಜನೆಯಡಿ 12,340 ಯುವ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 39,134 ರೈತರಿಗೆ 43.98 ಕೋಟಿ ರೂ. ಬೆಳೆ ವಿಮೆ ಪರಿಹಾರ ಜಮೆ ಮಾಡಲಾಗಿದೆ. ಇದೇ ಸಾಲಿನ ಬೆಳೆ ಹಾನಿ ಪರಿಹಾರವಾಗಿ 66,834 ರೈತರಿಗೆ 128.73 ಕೋಟಿ ರೂ. ಪಾವತಿಸಲಾಗಿದೆ. ಬೇಸಿಗೆಯಲ್ಲಿ ಅಕಾಲಿಕ ಆಲಿಕಲ್ಲು ಮಳೆಯಿಂದ ಉಂಟಾದ ಹಾನಿಗೆ ಪರಿಹಾರವಾಗಿ 1,221 ರೈತರಿಗೆ 1.72 ಕೋಟಿ ರೂ. ಮೊತ್ತವನ್ನು ಪಾವತಿಸಲಾಗಿದೆ ಎಂದು ಹೇಳಿದರು.

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರದ ಕೆ.ವೆಂಕಟರಮಣ (ಬಾಬಜಿ) ಹಾಗೂ ರಂಗಭೂಮಿ ಕ್ಷೇತ್ರದ ಕೆ. ವಿಜಯಲಕ್ಷ್ಮೀ ಪಾಟೀಲ ಅವರಿಗೆ ಜಿಲ್ಲೆಯ ಪರವಾಗಿ ಸಚಿವರು ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಮಹಾನಗರ ಪೊಲೀಸ್ ಆಯುಕ್ತ ಬೋರಸೆ ಭೂಷಣ್ ಗುಲಾಬರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಐಎಎಸ್ ಪ್ರೊಬೇಷನರಿ ಅಧಿಕಾರಿ ಅನುಪ್ರಿಯಾ ಸಾಕ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ತಹಸೀಲ್ದಾರ್ ಡಾ. ಡಿ.ಎಚ್. ಹೂಗಾರ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಪಥಸಂಚಲನ :

ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತುಕಡಿಯ ನಾಯಕ ವಾಸು ರಕ್ಷೇದ, ನಾಗರಿಕ ಪೊಲೀಸ್ ತುಕಡಿಯ ನಾಯಕ ವೆಂಕನಗೌಡ ಸಿ., ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಮಹಿಳಾ ತಂಡದ ತುಕಡಿಯ ನಾಯಕಿ ಪದ್ಮಮ್ಮ, ಗೃಹರಕ್ಷಕ ದಳದ ತುಕಡಿಯ ನಾಯಕ ರಾಚಯ್ಯ ಅಮರಪನಮಠ, ಅಗ್ನಿಶಾಮಕ ಇಲಾಖೆಯ ತುಕಡಿಯ ನಾಯಕ ಆರ್.ಡಿ. ಹೆಬ್ಬಳ್ಳಿ ಹಾಗೂ ಅರಣ್ಯ ಇಲಾಖೆಯ ತುಕಡಿಯ ನಾಯಕ ಕಲ್ಲಪ್ಪ ಕೆಂಗಾರ ಸೇರಿದಂತೆ ವಿವಿಧ ತುಕಡಿಗಳಿಂದ ಪಥಸಂಚಲನ ನಡೆಯಿತು.

ಪಥಸಂಚಲನ ವಿಜೇತರು :

ಪಥಸಂಚಲನದ ತರಬೇತಿ ಪಡೆದ (ಟ್ರೇನ್ಡ್) ವಿಭಾಗದಲ್ಲಿ ಎನ್.ಎ.ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆ ಪ್ರಥಮ ಹಾಗೂ ಸೀನಿಯರ್ ಎನ್‌ಸಿಸಿ ತಂಡ ದ್ವಿತೀಯ ಸ್ಥಾನ ಪಡೆದವು. ತರಬೇತಿ ಪಡೆಯದ (ಅನ್‌ಟ್ರೇನ್ಡ್) ವಿಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆ, ತಿಮ್ಮಾಪುರ ಪ್ರಥಮ, ಸರ್ಕಾರಿ ಪ್ರೌಢಶಾಲೆ, ಲೋಕೂರ ದ್ವಿತೀಯ ಹಾಗೂ ಕೆ.ಎನ್.ಕೆ. ಬಾಲಕಿಯರ ಪ್ರೌಢಶಾಲೆ ತಂಡ ತೃತೀಯ ಸ್ಥಾನ ಪಡೆದುಕೊಂಡವು.

ವಿಶೇಷ ಬಹುಮಾನ :

ಜಿಲ್ಲಾ ಸಶಸ್ತ್ರ ಪೊಲೀಸ್ ಬ್ಯಾಂಡ್ ಮಾಸ್ಟರ್ ವೈ.ಎಫ್. ಭಜಂತ್ರಿ ಮತ್ತು ಸ್ಟಿಕ್ ಮೇಜರ್ ವೆಂಕಟೇಶ್ ಅವರು ವಿಶೇಷ ಬಹುಮಾನ ಪಡೆದರು.

ಸಾಂಸ್ಕೃತಿಕ ಕಾರ್ಯಕ್ರಮ :

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಸತಿ ನಿಲಯದ ವಿದ್ಯಾರ್ಥಿನಿಯರ ಕಲಾತಂಡಗಳು, ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Tags

santosh ladKannada
share
ವಾರ್ತಾಭಾರತಿ
ವಾರ್ತಾಭಾರತಿ
Next Story
X