Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಎಪ್ರಿಲ್‍ನೊಳಗೆ 3 ಸಾವಿರ ಲೈನ್‍ಮೆನ್‍ಗಳ...

ಎಪ್ರಿಲ್‍ನೊಳಗೆ 3 ಸಾವಿರ ಲೈನ್‍ಮೆನ್‍ಗಳ ನೇಮಕ : ಇಂಧನ ಸಚಿವ ಕೆ.ಜೆ.ಜಾರ್ಜ್

‘ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಸನ್ನದ್ಧ’

ವಾರ್ತಾಭಾರತಿವಾರ್ತಾಭಾರತಿ17 Feb 2025 8:00 PM IST
share
ಎಪ್ರಿಲ್‍ನೊಳಗೆ 3 ಸಾವಿರ ಲೈನ್‍ಮೆನ್‍ಗಳ ನೇಮಕ : ಇಂಧನ ಸಚಿವ ಕೆ.ಜೆ.ಜಾರ್ಜ್

ಹಾವೇರಿ : ರಾಜ್ಯದಲ್ಲಿ ಖಾಲಿ ಇರುವ 3 ಸಾವಿರ ಲೈನ್‍ಮೆನ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಎಪ್ರಿಲ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸೋಮವಾರ ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಲೈನ್‍ಮೆನ್‍ಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲವಿದ್ದುದರಿಂದ ವಿದ್ಯುತ್ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲಾಗಿದೆ. ಪ್ರಸಕ್ತ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದು, ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರತೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜನಪ್ರತಿನಿಧಿಗಳ ಸಲಹೆ ಪಡೆಯಿರಿ: ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದುದರಿಂದ, ಅವರನ್ನು ಭೇಟಿಯಾಗಿ ಸಲಹೆಗಳನ್ನು ಪಡೆಯಿರಿ. ತೊಂದರೆಗಳಿದ್ದರೆ ನಿಮ್ಮ ವ್ಯಾಪ್ತಿಯಲ್ಲಿ ಸರಿ ಪಡಿಸಿ, ಇಲ್ಲವೇ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತನ್ನಿ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅಧಿಕಾರಿಗಳಿಗೆ ಜಾರ್ಜ್ ಸೂಚಿಸಿದರು.

ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಸೋಲಾರ್ ಪಂಪ್ ಸೆಟ್ ಒದಗಿಸುವ ಕುಸುಮ್-ಬಿ ಯೋಜನೆಗೆ ಸರಕಾರ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ತನ್ನ ಪಾಲಿನ ಸಬ್ಸಿಡಿಯನ್ನು ಶೇ.50ಕ್ಕೆ ಹೆಚ್ಚಿಸಿದ್ದು, ಕೇಂದ್ರ ಸರಕಾರ ಶೇ.30ರಷ್ಟು ಸಬ್ಸಿಡಿ ನೀಡುತ್ತದೆ. ರೈತರು ಕೇವಲ ಶೇ.20 ಮಾತ್ರ ಹಣ ಪಾವತಿಸಿ ಸೋಲಾರ್ ಪಂಪ್ ಸೆಟ್ ಪಡೆಯಬಹುದು. ಈ ಯೋಜನ ರೈತರಿಗೆ ವರದಾನವಾಗಲಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಿ ಮೂಲ ಸೌರ್ಯ ಒದಗಿಸಿದೆ. ಉಳಿದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬಂದ ಅಕ್ರಮ-ಸಕ್ರಮ ಅರ್ಜಿಗಳ ಕುರಿತು ನಂತರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಜಾರ್ಜ್ ತಿಳಿಸಿದರು.

ಹಾವೇರಿ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ನೆಗಳೂರಿನಲ್ಲಿ 110 ಕೆ.ವಿ. ಸಾಮರ್ಥ್ಯದ ಸ್ಟೆಷನ್ ಪ್ರಾರಂಭಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಎರಡು ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಮಾತನಾಡಿ, ಅಧಿಕ ಒತ್ತಡದಿಂದ ಟ್ರಾನ್ಸ್ ಫಾರ್ಮರ್ ಗಳು ಸುಡುತ್ತಿವೆ. ಆದುದರಿಂದ, ಅವುಗಳನ್ನು ಮೇಲ್ದರ್ಜೆಗೇರಿಸಬೇಕು. ಸುಟ್ಟು ಹೋದ ಟ್ರಾನ್‍ಫಾರ್ಮರ್ ಗಳನ್ನು ಶೀಘ್ರ ಬದಲಿಸಬೇಕು ಎಂದು ಮನವಿ ಮಾಡಿದರು.

ಹಿರೇಕೆರೂರು ಶಾಸಕ ಯು.ಬಿ.ಬಣಕಾರ್ ಮಾತನಾಡಿ, ಕೃಷಿ ಪಂಪ್ ಸೆಟ್ ಗಳಿಗೆ ದಿನದ ಏಳು ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು. ಕೆಲವು ಕಡೆ ಹಳೆಯದಾಗಿರುವ ವಿದ್ಯುತ್ ಲೈನ್‍ಗಳನ್ನು ಬದಲಿಸಬೇಕು ಎಂದು ಮನವಿ ಮಡಿದರು.

ಶಾಸಕರ ಅಹವಾಲುಗಳನ್ನು ಆಲಿಸಿದ ಕೆ.ಜೆ.ಜಾರ್ಜ್, ಈ ಎಲ್ಲಾ ವಿಚಾರಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶರಿಗೆ ಸೂಚಿಸಿದರು. ಜತೆಗೆ ಇಲ್ಲಿನ ಸಕ್ಕರೆ ಕಾರ್ಖಾನೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ವರದಿ ಪಡೆದು ಕ್ರಮ ಜರುಗಿಸುವಂತೆಯೂ ತಾಕೀತು ಮಾಡಿದರು.

ಸಭೆಯಲ್ಲಿ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ್, ಶಾಸಕರಾದ ಪ್ರಕಾಶ್ ಕೋಳಿವಾಡ, ಯಾಸಿರ್ ಅಹ್ಮದ್ ಖಾನ್ ಪಠಾಣ್, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X