Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಲೋಕಸಭಾ ಚುನಾವಣೆ | ಪಕ್ಷೇತರ...

ಲೋಕಸಭಾ ಚುನಾವಣೆ | ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದಿಂಗಾಲೇಶ್ವರ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ18 April 2024 5:54 PM IST
share
ಲೋಕಸಭಾ ಚುನಾವಣೆ | ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬ‍ಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಿರಹಟ್ಟಿರ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಅವರು ಇಂದು(ಗುರುವಾರ) ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಸಾಂಕೇತಿಕವಾಗಿ ಒಂದು ಸೆಟ್‌ ನಾಮಪತ್ರ ಸಲ್ಲಿಸಿದರು.

ಮೊದಲು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಅವರು ಬಳಿಕ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಮತ್ತೊಮ್ಮೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಬಾರದೆಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಬಿಜೆಪಿ ವರಷ್ಠರಿಗೆ ಒತ್ತಾಯ ಮಾಡಿದ್ದರು. ಆದರೆ ಇದು ಯಾವುದಕ್ಕೂ ಮಣೆ ಹಾಕದ ಬಿಜೆಪಿ ಹೈಕಮಾಂಡ್‌ ಜೋಶಿ ಅವರಿಗೆ ಟಿಕೆಟ್‌ ನೀಡಿತ್ತು. ಇದನ್ನು ವಿರೋಧಿಸಿ ದಿಂಗಾಲೇಶ್ವರ ಸ್ವಾಮೀಜಿಗಳು ಜೋಶಿ ಅವರ ವಿರುದ್ಧ ಸ್ವತಂತ್ರ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, "ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಧರ್ಮ ಸಮನ್ವಯ ಸಾರುವ ಉದ್ದೇಶದಿಂದ ನಾಮಪತ್ರ ಸಲ್ಲಿಸಿದ್ದೇವೆ. ಈ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಈಗಾಗಲೇ ಮಾಧ್ಯಮಗಳ ಮೂಲಕ ಹೇಳಿದ್ದೇನೆ. ಯಾರ ವಿರುದ್ಧ ಮಾತನಾಡುತ್ತಿದ್ದೇನೋ, ಅವರು ತೊಂದರೆ ಕೊಡುತ್ತಿದ್ದಾರೆ. ನೂರಾರು ವಿಘ್ನಗಳು ಬಂದಿವೆ. ಬಸವಾದಿ ಪರಂಪರೆ ನಾಡಿನಲ್ಲಿ ನಾಶವಾಗುತ್ತಿದೆ. ಭಸ್ಮ ಮತ್ತು ಭಂಡಾರ ಮಾಯವಾಗಿ ಬೇರೆ ಶಬ್ದಗಳು ಆಕ್ರಮಿಸಿಕೊಳ್ಳುತ್ತಿವೆ. ನಮ್ಮ ನಾಡಿಗೆ ತನ್ನದೇ ಆದ ಸಂಸ್ಕೃತಿ ಇದೆ. ನಮ್ಮ ಕನ್ನಡ ನಾಡಿನ ಇತಿಹಾಸ ಪರಂಪರೆ ತಿರಸ್ಕಾರ ಮಾಡುವವರ ವಿರುದ್ಧ ಸಿಡಿದಿದ್ದೇವೆ" ಎಂದು ನುಡಿದರು.

"ನಾಲ್ಕು ಬಾರಿ ಸಂಸತ್​​ ಭವನ ಪ್ರವೇಶ ಮಾಡಿದವರು ಇದ್ದಾರೆ. ಅವರು ಬಸವಣ್ಣ, ಅಂಬೇಡ್ಕರ ಭಾವಚಿತ್ರ ತಮ್ಮ ಕಚೇರಿಯಿಂದ ತೆಗದು ಹಾಕಿದ್ದಾರೆ. ಮಹರ್ಷಿ ವಾಲ್ಮೀಕಿಗಳ ಭಾವಚಿತ್ರ ಸಹ ತೆಗೆದುಹಾಕಿದ್ದಾರೆ. ನಾಡಿನ ದಾರ್ಶನಿಕರು, ರೈತರು, ಮಹಾತ್ಮರನ್ನು, ಸಾಧು-ಸಂತರ, ಸರ್ವರ ಹಿತ ಬಯಸಬೇಕಿತ್ತು. ಅಧಿಕಾರ, ಹಣದ ಮದದಲ್ಲಿ ಎಲ್ಲರನ್ನೂ ನೋಡುತ್ತೇವೆಂಬ ದಾರ್ಷ್ಯ ತೋರಿಸುತ್ತಿದ್ದಾರೆ. ಈ ಚುನಾವಣೆಯನ್ನು ನಾವು ಧರ್ಮಯುದ್ಧ ಎಂದು ಭಾವಿಸಿದ್ದೇವೆ. ಕ್ಷೇತ್ರ ಅಭಿವೃದ್ಧಿ ಬಿಟ್ಟು, ತಮ್ಮ ಅಭಿವೃದ್ಧಿ ಮಾಡಿಕೊಂಡಿದ್ದಾರೆ" ಎಂದು ಹೇಳಿದರು.

ನಮ್ಮ ಯಾವ ಪ್ರಶ್ನೆಗೂ ಅವರಿಗೆ ಉತ್ತರ ಕೊಡುವ ಮನಸ್ಥಿತಿ ಇಲ್ಲ. ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ. ಇವರು ನಾಡಿಗೆ ಕಂಟಕವಾಗಿದ್ದಾರೆ. ಇವರ ಬದಲಾವಣೆಯೇ ನಮ್ಮ ಮೂಲ ಉದ್ದೇಶ. ಜನ ಹಣ ಭಯಕ್ಕೆ ಮತ ಚಲಾಯಿಸದೇ ಸ್ವಾಭಿಮಾನಕ್ಕಾಗಿ ಮತ ಚಲಾಯಿಸಬೇಕು. ನಮ್ಮ ಬಲ ಕ್ಷೀಣಿಸಿಲ್ಲ. ಯಾವ ಮಠಾಧೀಶರು ಬರಬೇಡಿ ಎಂದು ಹೇಳಿದ್ದೇನೆ. ಮಠಾಧೀಶರನ್ನು ನಾನು ಚುನಾವಣೆಗೆ ಬಳಸಿಕೊಳ್ಳುವುದಿಲ್ಲ. ಕೇವಲ ಸಲಹೆ ಪಡೆಯಲು ಮಾತ್ರ ಮಠಾಧೀಶರ ಸಾಥ್ ತೆಗೆದುಕೊಂಡಿದ್ದೇವೆ. ಮಠ ಬಿಡಿಸುವಷ್ಟು ತೊಂದರೆ ಕೊಡುತ್ತಿದ್ದಾರೆ. ನಮ್ಮ ಜೊತೆ ಇದ್ದ ಮಠಾಧೀಶರನ್ನು ದೂರ ಮಾಡುತ್ತಿದ್ದಾರೆ. ಬ್ರಿಟಿಷರ ಕಾಲದ ವ್ಯವಸ್ಥೆ ಧಾರವಾಡದಲ್ಲಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X