Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಮಹಿಳೆಯ ವಿವಸ್ತ್ರ ಪ್ರಕರಣದ ಹಿಂದೆ ಶಾಸಕ...

ಮಹಿಳೆಯ ವಿವಸ್ತ್ರ ಪ್ರಕರಣದ ಹಿಂದೆ ಶಾಸಕ ಮಹೇಶ್ ಟೆಂಗಿನಕಾಯಿ ಕೈವಾಡ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪ

ವಾರ್ತಾಭಾರತಿವಾರ್ತಾಭಾರತಿ9 Jan 2026 10:00 AM IST
share
ಮಹಿಳೆಯ ವಿವಸ್ತ್ರ ಪ್ರಕರಣದ ಹಿಂದೆ ಶಾಸಕ ಮಹೇಶ್ ಟೆಂಗಿನಕಾಯಿ ಕೈವಾಡ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪ

ಹುಬ್ಬಳ್ಳಿ: ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಹೇಶ್ ಟೆಂಗಿನಕಾಯಿ ವಿರುದ್ಧ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದು ಶಾಸಕರೇ ರೂಪಿಸಿರುವ ಪೂರ್ವನಿಯೋಜಿತ ರಾಜಕೀಯ ಟೂಲ್‌ಕಿಟ್ ಆಗಿದ್ದು, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರು ಮಹಿಳೆಯನ್ನು ಕರೆದೊಯ್ಯುವಾಗ ಉದ್ದೇಶಪೂರ್ವಕವಾಗಿ ವಿಡಿಯೋ ಚಿತ್ರೀಕರಿಸಲಾಗಿದೆ. ನಂತರ ಅವಳೇ ಬಟ್ಟೆ ಬಿಚ್ಚಿಕೊಂಡಿರುವ ದೃಶ್ಯವನ್ನು ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈ ವಿಡಿಯೋವನ್ನು ಮಹಿಳೆಯ ತಮ್ಮ ಮರಿಯಾದಾಸ್ ಎಂಬಾತನೇ ಚಿತ್ರೀಕರಿಸಿದ್ದಾನೆ ಎಂಬ ಮಾಹಿತಿ ಲಭ್ಯವಿದೆ ಎಂದು ಅವರು ಹೇಳಿದರು.

ಪೊಲೀಸ್ ಇಲಾಖೆಯನ್ನು ಬ್ಲಾಕ್‌ಮೇಲ್ ಮಾಡುವ ಉದ್ದೇಶದಿಂದಲೇ ಈ ವಿಡಿಯೋ ಹರಿಬಿಡಲಾಗಿದೆ. ಶಾಸಕ ಮಹೇಶ್ ಟೆಂಗಿನಕಾಯಿ ಅವರ ಕುಮ್ಮಕ್ಕಿನಿಂದಲೇ ಈ ಕೃತ್ಯ ನಡೆದಿದ್ದು, ರಾಕ್ಷಸ ಪ್ರವೃತ್ತಿಯ ವ್ಯಕ್ತಿಗಳನ್ನು ಪಕ್ಷದಲ್ಲಿರಿಸಿಕೊಂಡು ಇಂತಹ ಕೃತ್ಯಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ರಜತ್ ಉಳ್ಳಾಗಡ್ಡಿಮಠ ಆರೋಪಿಸಿದರು.

ಶಾಸಕರಿಗೆ ರಾಜಕೀಯವಾಗಿ ಅಭದ್ರತೆ ಕಾಡುತ್ತಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಮತ್ತು ಪ್ರಚಾರಕ್ಕಾಗಿ ಇಂತಹ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ. ಉತ್ತರ ಕರ್ನಾಟಕ ಪ್ರವಾಸದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಇದ್ದ ದಿನವೇ ಈ ವಿಡಿಯೋ ಬಿಡುಗಡೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೊದಲು ಕೇವಲ 8-9 ಸೆಕೆಂಡ್‌ಗಳ ತುಣುಕನ್ನು ಹಂಚಿ, ಸತ್ಯ ಹೊರಬರುತ್ತಿದ್ದಂತೆ ನಿಲುವು ಬದಲಿಸಿದ್ದಾರೆ ಎಂದು ಅವರು ಟೀಕಿಸಿದರು.

ಮಹಿಳೆಯ ನಡವಳಿಕೆಗೆ ಸಂಬಂಧಿಸಿದ ಪೂರ್ಣ ವಿಡಿಯೋವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಈ ಕುರಿತು ಪೊಲೀಸ್ ಇಲಾಖೆಯು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

Tags

Rajath UllagaddimathCongresswomanMahesh Tenginkai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X