ಸಂಸದೆ ಸುಮಲತಾ ಟಿಕೆಟ್ ವಿವಾದ ಬಗೆಹರಿಯಲಿದೆ: ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ

ಹುಬ್ಬಳ್ಳಿ: ಮಂಡ್ಯ ಲೋಕಸಭೆ ಟಿಕೆಟ್ ಹಂಚಿಕೆ ವಿವಾದ ಪರಿಹಾರ ಕಾಣಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಏನೂ ಸಮಸ್ಯೆಯಿಲ್ಲ. ಅಂತೆಯೇ ಜೆಡಿಎಸ್ ನಿಂದಲೂ ಅಂಥ ಸಮಸ್ಯೆಯಿಲ್ಲ. ಪಕ್ಷದ ರಾಷ್ಟ್ರೀಯ ನಾಯಕರು ಬಗೆಹರಿಸಲಿದ್ದಾರೆ ಎಂದು ತಿಳಿಸಿದರು.
ಒಂದು ಮನೆಯಲ್ಲೇ ಕೆಲವೊಮ್ಮೆ ಹೊಂದಾಣಿಕೆ ಕಷ್ಟವಾಗಿರುತ್ತದೆ. ಹಾಗಿರುವಾಗ ದೊಡ್ಡ ಪಕ್ಷ, ಲಕ್ಷಾಂತರ ಮುಖಂಡರು, ಕಾರ್ಯಕರ್ತರು ಇರುವಾಗ ಸಮಸ್ಯೆ ಸಹಜ. ಆದರೆ, ಅದೆಲ್ಲ ಬಗೆಹರಿಯುತ್ತದೆ ಎಂದು ಹೇಳಿದರು.
ಮಂಡ್ಯ ಸಂಸದೆ ಸುಮಲತಾ ಮತ್ತು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರಿಬ್ಬರ ಸಹಕಾರದಿಂದ ಟಿಕೆಟ್ ಹಂಚಿಕೆ ವಿವಾದ ಅಂತ್ಯ ಕಾಣಲಿದೆ ಎಂದು ಜೋಶಿ ವಿಶ್ವಾಸ ವ್ಯಕ್ತಡಿಸಿದರು.
Next Story





