Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ನಾನು ಕಾಂಗ್ರೆಸ್ ವಿರೋಧಿ, ಬಿಜೆಪಿಯಲ್ಲೇ...

ನಾನು ಕಾಂಗ್ರೆಸ್ ವಿರೋಧಿ, ಬಿಜೆಪಿಯಲ್ಲೇ ಮುಂದುವರೆಯುತ್ತೇನೆ: ಶಂಕರ ಪಾಟೀಲ್ ಮುನೇನಕೊಪ್ಪ

ವಾರ್ತಾಭಾರತಿವಾರ್ತಾಭಾರತಿ29 Jan 2024 3:53 PM IST
share
ನಾನು ಕಾಂಗ್ರೆಸ್ ವಿರೋಧಿ, ಬಿಜೆಪಿಯಲ್ಲೇ ಮುಂದುವರೆಯುತ್ತೇನೆ: ಶಂಕರ ಪಾಟೀಲ್ ಮುನೇನಕೊಪ್ಪ

ಹುಬ್ಬಳ್ಳಿ: ನಾನು ಕಾಂಗ್ರೆಸ್ ವಿರೋಧಿ, ಬಿಜೆಪಿಯಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ ಪೋಹಗಳಿಗೆ ಮಾಜಿ ಸಚಿವ ಶಂಕರಪಾಟೀಲ ಮುನೇಕಕೊಪ್ಪ ತೆರೆ ಎಳಿದಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ‌. ಅದಾಗ್ಯೂ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಆತ್ಮೀಯರಿದ್ದಾರೆ. ಶೆಟ್ಟರ್ ಬಿಜೆಪಿ ತೊರೆದ ಬಳಿಕ, ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಹಲವರು ನನಗೂ ಸಲಹೆ ನೀಡಿದ್ದರು. ಆದರೆ, ನಾನು ಬಿಜೆಪಿಯಲ್ಲೇ ಇರುವುದಾಗಿ ಸ್ಪಷ್ಟಪಡಿಸಿದ್ದೇನೆ ಎಂದರು.

ಬಿಜೆಪಿ ನಾಯಕರಾದ ಜೆ.ಪಿ. ನಡ್ಡಾ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಹಾಗೂ ಪ್ರಹ್ಲಾದ್ ಜೋಶಿ ಅವರು ಜಗದೀಶ ಶೆಟ್ಟರ್ ಅವರನ್ನು ಕರೆತಂದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಶೆಟ್ಟರ್, ಬಿಜೆಪಿಗೆ ವಾಪಸಾಗಿರುವುದರಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಂತಾಗಿದೆ ಎಂದರು.

ರಾಜ್ಯದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಆಯ್ಕೆ ಬಳಿಕ ಅನೇಕ ಬದಲಾವಣೆ ಆಗಿವೆ. ಈ ಹಿಂದೆ ಶೆಟ್ಟರ್ ಸ್ವಾಭಿಮಾನಕ್ಕೆ ದಕ್ಕೆಯಾಗಿದೆ ಎಂದು ಪಕ್ಷ ತೊರೆಯುವ ಕೆಲಸ ಮಾಡಿದ್ದರು. ಇದೀಗ ಸೂಕ್ತವಾದ ಸ್ಥಾನಮಾನ ಹೈಕಮಾಂಡ ನೀಡಿದೆ. ಈ ಹಿನ್ನೆಲೆ ಜಗದೀಶ್ ಶೆಟ್ಟರ್ ಪುನಃ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದರು.

ಲಿಂಗಾಯತ ಸಮೂದಾಯದ ನಾಯಕರಿಗೆ ಅನ್ಯಾಯ ಅಗಿದೆ ಎಂದು ನಾನು ಎಲ್ಲಿ ಹೇಳಿಲ್ಲ, ಆದರೆ ಎಲ್ಲರಿಗೂ ಸರಿಸಮಾನ ಅವಕಾಶ ಸಿಗಬೇಕೆಂಬುದು ನನ್ನ ಆಸೆ ಅದಕ್ಕೆ ಬದ್ದವಾಗಿದ್ದೇನೆ ಎಂದು ತಿಳಿಸಿದರು.

ಧಾರವಾಡ ಜಿಲ್ಲೆಯ ತಾಲೂಕುಗಳಲ್ಲಿ 2-3 ಬಣಗಳಿವೆ. ಅವುಗಳನ್ನು ಮುಂದಿನಗಳಲ್ಲಿ ಚರ್ಚಿಸಿ ಸರಿಪಡಿಸಲಾಗುವುದು, ನಮ್ಮೆಲ್ಲರ ಗುರಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡುವ ಉದ್ದೇಶ ಮಾತ್ರ, ಅದಕ್ಕಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X