Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಕರಸೇವಕರ ಬಂಧನ ಖಂಡಿಸಿ ಹುಬ್ಬಳ್ಳಿಯಲ್ಲಿ...

ಕರಸೇವಕರ ಬಂಧನ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ; ಠಾಣೆಗೆ ನುಗ್ಗಲು ಯತ್ನಿಸಿದ ವಿಪಕ್ಷ ನಾಯಕ ಅಶೋಕ್ ಸೇರಿ 150 ಮಂದಿ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ3 Jan 2024 6:00 PM IST
share
ಕರಸೇವಕರ ಬಂಧನ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ; ಠಾಣೆಗೆ ನುಗ್ಗಲು ಯತ್ನಿಸಿದ ವಿಪಕ್ಷ ನಾಯಕ ಅಶೋಕ್ ಸೇರಿ 150 ಮಂದಿ ವಶಕ್ಕೆ

ಹುಬ್ಬಳ್ಳಿ: ನಗರದಲ್ಲಿ ಕರಸೇವಕರ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು, ವಿಪಕ್ಷ ನಾಯಕ ಆರ್. ಅಶೋಕ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ ಆರ್ ಪಾಟೀಲ್ ಸೇರಿದಂತೆ 150 ಜನರನ್ನು ವಶಕ್ಕೆ ಪಡೆದರು.

ಬಾಬರಿ ಮಸೀದಿ ಧ್ವಂಸ ಸಂದರ್ಭದ ಗಲಭೆಯ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇಲ್ಲಿನ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆ ವೇಳೆ ಮಾತನಾಡಿದ ಆರ್ ಅಶೋಕ್, ರಾಮ ಮಂದಿರ ನಿರ್ಮಿಸಬಾರದು ಎನ್ನುವುದು ಕಾಂಗ್ರೆಸ್ ಹುನ್ನಾರ. ಸಿಎಂ ಸಿದ್ದರಾಮಯ್ಯ ಅವರು ಹಿಂದೂ‌-ಮುಸ್ಲಿಮ್ ನಡುವೆ ಬೆಂಕಿ ಹಚ್ಚುವ ʼಅಂಬಾಸಿಡರ್ʼ ಇದ್ದಂತೆ. ಅದಕ್ಕಾಗಿ ರಾಜ್ಯದಲ್ಲಿ ಇಂತಹ ಗದ್ದಲ ನಡೆಯುತ್ತಿದೆ ಎಂದು ಹೇಳಿದರು.

'ರಾಜ್ಯದಲ್ಲಿ 69 ಸಾವಿರ ಎಲ್.ಪಿ.ಆರ್. ಪ್ರಕರಣಗಳಿವೆ? ಈವರೆಗೆ ಎಷ್ಟು ಮಂದಿ ಆರೋಪಿಯನ್ನು ಬಂಧಿಸಿದ್ದೀರಿ? ರಾಮಮಂದಿರ ಉದ್ಘಾಟನೆ ಕಾಂಗ್ರೆಸ್ ಗೆ ಹೊಟ್ಟೆಉರಿ ಆಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತ ಬ್ಯಾಂಕ್‌ ನ ಚಿಂತನೆ ಆರಂಭವಾಗಿದೆ. ಅದಕ್ಕಾಗಿ ರಾಮ, ಆಂಜನೇಯ ಭಜನೆ ಮಾಡಬಾರದು ಎಂದು, ಮುಸ್ಲಿಮರನ್ನು ಓಲೈಸುವ ಹುನ್ನಾರ ನಡೆಸಿದ್ದಾರೆ' ಎಂದು ಅಶೋಕ್ ಆರೋಪಿಸಿದರು.

ಪೊಲೀಸ್ ಠಾಣೆ ಮುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಮಾತನಾಡಿ, ಮುನ್ನೆಚ್ಚರಿಕೆ ಕ್ರಮವಾಗಿ 150 ಜನರನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು

Tags

AshokKarasevaks
share
ವಾರ್ತಾಭಾರತಿ
ವಾರ್ತಾಭಾರತಿ
Next Story
X