ಹಾವೇರಿಯಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ಆರು ಮಂದಿ ಮೃತ್ಯು

ಹಾವೇರಿ : ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ಬಳಿ ನಡೆದಿದೆ.
ಮೃತರನ್ನು ಫರಾನ್ (27), ಉಮ್ಮಿಶಿಪಾ (16), ಅಲಿಷಾ(20), ಫೂಲಖಾನ್ (17), ಫಿರೋಜ್( 42) ಎಂದು ಗುರುತಿಸಲಾಗಿದೆ. . ಇನ್ನೊಬ್ಬರ ಮೃತದೇಹ ಯಾರದ್ದು ಎಂಬ ಬಗ್ಗೆ ಮಾಹಿತಿ ಗೊತ್ತಾಗಬೇಕಿದೆ.
ಮೃತರು ರಾಣೇಬೆನ್ನೂರು ನಗರ ನಿವಾಸಿಗಳು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡ ತಷ್ಕಿನ್, ಮೆಹಕ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನಲೆಯಲ್ಲಿ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story