Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಧಾರವಾಡ‌
  4. ಕರ್ನಾಟಕ ರಾಜ್ಯ ಯುವ ಆಯೋಗವನ್ನು...

ಕರ್ನಾಟಕ ರಾಜ್ಯ ಯುವ ಆಯೋಗವನ್ನು ಸರ್ಕಾರವು ತಕ್ಷಣವೇ ಸ್ಥಾಪಿಸಬೇಕು: ಸೋಲಿಡಾರಿಟಿ ಯೂತ್ ಮೂವ್ಮೆಂಟ್

ವಾರ್ತಾಭಾರತಿವಾರ್ತಾಭಾರತಿ8 Sept 2026 5:57 PM IST
share
ಕರ್ನಾಟಕ ರಾಜ್ಯ ಯುವ ಆಯೋಗವನ್ನು ಸರ್ಕಾರವು ತಕ್ಷಣವೇ ಸ್ಥಾಪಿಸಬೇಕು: ಸೋಲಿಡಾರಿಟಿ ಯೂತ್ ಮೂವ್ಮೆಂಟ್

ಹುಬ್ಬಳ್ಳಿ: ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು. 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ನೀಡಿರುವ ಭರವಸೆಯಂತೆ ಕರ್ನಾಟಕ ರಾಜ್ಯ ಯುವ ಆಯೋಗವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ತೀರ್ಥಹಳ್ಳಿ ಆಗ್ರಹಿಸಿದರು.

ಸೋಲಿಡಾರಿಟಿ ಯೂತ್ ಮೂವ್ಮೆಂಟ್, ಹುಬ್ಬಳ್ಳಿ ಘಟಕದ ವತಿಯಿಂದ ಹುಬ್ಬಳಿ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯದ ಯುವಜನರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ, ಅವರ ಸಮಸ್ಯೆಗಳಿಗೆ ನೀತಿ ಮಟ್ಟದಲ್ಲಿ ಸ್ಪಂದಿಸುವ ಹಾಗೂ ಯುವಜನರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಯುವ ಆಯೋಗದ ಸ್ಥಾಪನೆ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.

ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೆ ಯುವ ಆಯೋಗಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಕೇರಳ, ಅಸ್ಸಾಂ, ಮಿಜೋರಾಂ ಮತ್ತು ಬಿಹಾರ ರಾಜ್ಯಗಳ ಅನುಭವಗಳು, ಯುವ ಆಯೋಗಗಳು ಯುವಕರ ಹಕ್ಕುಗಳ ರಕ್ಷಣೆ, ನೀತಿ ರೂಪಣೆ, ಕೌಶಲ್ಯ ಅಭಿವೃದ್ಧಿ, ಉದ್ಯೋಗ, ಮಾದಕ ವ್ಯಸನ ವಿರೋಧಿ ಕ್ರಮಗಳು ಮತ್ತು ಮಾನಸಿಕ ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.ಅದೇ ವೇಳೆ, ರಾಜ್ಯದ ಯುವಜನರನ್ನು ಸಾಮಾಜಿಕ, ಪ್ರಜಾಸತ್ತಾತ್ಮಕ ಮತ್ತು ಅಭಿವೃದ್ಧಿಯ ಪ್ರಕ್ರಿಯೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ಘೋಷಿಸಿರುವ ಭಾರತ್ ಜೋಡೋ ಯುವ ಸಂಘಟನೆ ರಚನೆಯ ನಿರ್ಧಾರವನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸ್ವಾಗತಿಸುತ್ತದೆ. ಇದರ ಜೊತೆಗೆ, ರಾಜ್ಯ ಯುವ ಆಯೋಗವನ್ನು ಸ್ಥಾಪಿಸಿದಲ್ಲಿ ಯುವಪರ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಯುವಜನರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಇನ್ನೂ ಯುವ ಆಯೋಗ ಸ್ಥಾಪನೆಯಾಗದೆ ಇರುವುದು ಅತ್ಯಂತ ವಿಷಾದಕರ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಯುವ ಆಯೋಗ ಸ್ಥಾಪಿಸುವುದಾಗಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಅದರಂತೆ, ಸರಕಾರ ತನ್ನ ಭರವಸೆಯನ್ನು ಕಾರ್ಯರೂಪಕ್ಕೆ ತಂದು ತಕ್ಷಣ ಯುವ ಆಯೋಗ ಸ್ಥಾಪನೆಯ ಅಧಿಸೂಚನೆಯನ್ನು ಹೊರಡಿಸಬೇಕು. ಮುಖ್ಯಮಂತ್ರಿ, ಸಚಿವ ಸಂಪುಟದ ಸದಸ್ಯರು ಮತ್ತು ಶಾಸಕರು ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಲು ಯುವ ಆಯೋಗ ಸ್ಥಾಪನೆಯ ತುರ್ತು ಘೋಷಣೆ ಮಾಡಬೇಕು. ಯುವ ಆಯೋಗವು ಯುವಕರಿಗೆ ನೀಡುವ ಸೌಲಭ್ಯವಲ್ಲ, ಅವರ ಸಂವಿಧಾನಾತ್ಮಕ ಹಕ್ಕು. ಈ ವಿಷಯವನ್ನು ಸೋಲಿಡಾರಿಟಿ ಯೂತ್ ಮೂವ್ ಮೆಂಟ್ ಕರ್ನಾಟಕವು ಈ ಹಿಂದೆಯೂ ನಿರಂತರವಾಗಿ ಸರ್ಕಾರದ ಗಮನಕ್ಕೆ ತಂದಿದೆ. ಮಾನ್ಯ ಮುಖ್ಯಮಂತ್ರಿಗಳಿಗೆ, ಮಾನ್ಯ ಉಪಮುಖ್ಯಮಂತ್ರಿಗಳಿಗೆ ಹಾಗೂ ಸಂಬಂಧಿತ ಸಚಿವರುಗಳಿಗೆ ಈ ಕುರಿತು ಪತ್ರಗಳನ್ನು ಸಲ್ಲಿಸಲಾಗಿದೆ. ಜೊತೆಗೆ, ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕತ್ವಕ್ಕೂ ಕರ್ನಾಟಕ ರಾಜ್ಯ ಯುವ ಆಯೋಗ ಸ್ಥಾಪನೆಯ ಅಗತ್ಯತೆಯನ್ನು ವಿವರಿಸಿ ಪತ್ರಗಳನ್ನು ಕಳುಹಿಸಲಾಗಿದೆ. ಈ ವಿಷಯವು ಕರ್ನಾಟಕ ವಿಧಾನ ಪರಿಷತ್ತಿನಲ್ಲಿಯೂ ಪ್ರಶ್ನೆಗಳ ರೂಪದಲ್ಲಿ ಎತ್ತಲ್ಪಟ್ಟಿರುವುದು, ಈ ಬೇಡಿಕೆಯ ಸಾರ್ವಜನಿಕ, ರಾಜಕೀಯ ಮತ್ತು ಶಾಸನಾತ್ಮಕ ಮಹತ್ವವನ್ನು ಸ್ಪಷ್ಟಪಡಿಸುತ್ತದೆ. ಕರ್ನಾಟಕದಲ್ಲಿ ಎರಡು ಕೋಟಿಗೂ ಅಧಿಕ ಯುವಜನರು ವಾಸಿಸುತ್ತಿದ್ದು, ಯುವಜನರು ರಾಜ್ಯದ ಅತ್ಯಂತ ಪ್ರಮುಖ ವರ್ಗವಾಗಿದ್ದಾರೆ. ಇಂದಿನ ಯುವಜನರು ಶಿಕ್ಷಣ, ಉದ್ಯೋಗ, ಸಾಮಾಜಿಕ ಗುರುತು ಮತ್ತು ನಾಗರಿಕ ಭಾಗವಹಿಸುವಿಕೆ ಎಂಬ ಹಲವು ಕ್ಷೇತ್ರಗಳಲ್ಲಿ ಸಮರ್ಪಕ ಸಾಂಸ್ಥಿಕ ಬೆಂಬಲವಿಲ್ಲದೆ ಅನೇಕ ಅನಾನುಕೂಲತೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಈ ಪರಿಣಾಮವಾಗಿ ನಿರುದ್ಯೋಗ, ಮಾನಸಿಕ ಒತ್ತಡ, ಮಾದಕ ವ್ಯಸನ, ಸೈಬರ್ ವಂಚನೆ, ಸಾಮಾಜಿಕ ಅಸುರಕ್ಷತೆ ಹಾಗೂ ನಿರ್ಧಾರ ಪ್ರಕ್ರಿಯೆಗಳಲ್ಲಿ ಸಮರ್ಪಕ ಪ್ರತಿನಿಧಿತ್ವದ ಕೊರತೆ ಮುಂತಾದ ಗಂಭೀರ ಸಮಸ್ಯೆಗಳು ಹೆಚ್ಚುತ್ತಿವೆ. ಕರ್ನಾಟಕ ಹಾಗೂ ದೇಶಾದ್ಯಂತ ಯುವಜನರು ತೀವ್ರ ಸಂಕಷ್ಟದ ಹಂತವನ್ನು ಎದುರಿಸುತ್ತಿದ್ದು, ಇದಕ್ಕೆ ಕೇಂದ್ರೀಕೃತ, ಸಾಂಸ್ಥಿಕ ಮತ್ತು ನಿರಂತರ ಹಸ್ತಕ್ಷೇಪದ ಅಗತ್ಯವಾಗಿದೆ. ಕಾಂಗ್ರೆಸ್ ಪಕ್ಷದ 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಯುವಜನರ ಕುರಿತು ನೀಡಿರುವ ಭರವಸೆಯನ್ನು ಮುಂದಿರಿಸಿ, ಕರ್ನಾಟಕ ರಾಜ್ಯ ಯುವ ಆಯೋಗದ ಸ್ಥಾಪನೆಗಾಗಿ ಆಡಳಿತಾತ್ಮಕ ಮತ್ತು ಶಾಸನಾತ್ಮಕ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದರು.

ಈ ಕುರಿತು ಇಲಾಖಾ ಮಟ್ಟದ ಸಮಿತಿ ರಚಿಸಿ, ಯುವ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ನಾಗರಿಕ ಸಮಾಜದ ಪ್ರತಿನಿಧಿಗಳು, ಶಿಕ್ಷಣ ತಜ್ಞರು, ಮನಃಸ್ವಾಸ್ಥ ತಜ್ಞರು, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರದ ತಜ್ಞರು ಹಾಗೂ ಸಂಬಂಧಿತ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಯುವ ಆಯೋಗದ ರಚನೆಗೆ ಕಾಲಮಿತಿಯ ಕಾರ್ಯಯೋಜನೆ ರೂಪಿಸಬೇಕಾಗಿ ವಿನಂತಿಸುತ್ತೇವೆ. ಈ ಪ್ರಯತ್ನದಲ್ಲಿ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕವು ಸರ್ಕಾರಕ್ಕೆ ತನ್ನ ಸಂಪೂರ್ಣ ಸಹಕಾರ ನೀಡಲು ಸಿದ್ಧವಾಗಿದೆ. ಯುವ ಆಯೋಗವು ಕೇವಲ ಕಲ್ಯಾಣಾತ್ಮಕ ಕ್ರಮವಲ್ಲ; ಅದು ರಾಜ್ಯದ ಪ್ರಜಾಸತ್ತಾತ್ಮಕ ಬಲವರ್ಧನೆ, ಸಾಮಾಜಿಕ ನ್ಯಾಯ, ಅಭಿವೃದ್ಧಿ ಮತ್ತು ಯುವಜನರ ಭವಿಷ್ಯಕ್ಕೆ ಸಂಬಂಧಿಸಿದ ಅತ್ಯಾವಶ್ಯಕ ಸಾಂಸ್ಥಿಕ ವ್ಯವಸ್ಥೆಯಾಗಿದೆ ಎಂಬುದು ನಮ್ಮ ದೃಢ ನಂಬಿಕೆಯಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಸದುಲ್ಲಾ ಖಾನ್ ಝಕಿ ಹಾಗೂ ರಾಜ್ಯ ಮಾಧ್ಯಮ ಸಂಯೋಜಕರಾದ ಇರ್ಷಾದ್ ವೇಣೂರು, ಸೋಲಿಡಾರಿಟಿ ಯೂತ್ ಮೂವ್ಮೆಂಟ್, ಹುಬ್ಬಳ್ಳಿ ನಗರ ಕಾರ್ಯದರ್ಶಿ ಅಬ್ದುಸ್ಸಲಾಮ್, ಕಾರ್ಯಕರ್ತರಾದ ಅಬೂಝರ್ ಉಪಸ್ಥಿತರಿದ್ದರು.

Tags

Solidarity Youth MovementKarnataka Youth Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X