Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಸ್ಲಿಮ್ ಸಮುದಾಯದ ಇನ್ನಷ್ಟು...

ಮುಸ್ಲಿಮ್ ಸಮುದಾಯದ ಇನ್ನಷ್ಟು ಅಭಿವೃದ್ಧಿಗೆ ಶಿಕ್ಷಣಕ್ಕೆ ಆದ್ಯತೆ ಅಗತ್ಯ: ತನ್ವೀರ್ ಹಾಶ್ಮಿ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ‘ಪ್ರಸಕ್ತ ಸನ್ನಿವೇಶ ಮತ್ತು ನಮ್ಮ ಜವಾಬ್ದಾರಿಗಳು’ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ29 July 2025 12:30 PM IST
share
ಮುಸ್ಲಿಮ್ ಸಮುದಾಯದ ಇನ್ನಷ್ಟು ಅಭಿವೃದ್ಧಿಗೆ ಶಿಕ್ಷಣಕ್ಕೆ ಆದ್ಯತೆ ಅಗತ್ಯ: ತನ್ವೀರ್ ಹಾಶ್ಮಿ

ಉಡುಪಿ, ಜು.29: ಇಂದು ಕೋಮುವಾದಿಗಳಲ್ಲಿ ಮುಸ್ಲಿಂ ಸಮುದಾಯದ ಪ್ರಗತಿಯ ಬಗ್ಗೆ ಆತಂಕವಿದೆ. ಆ ಕಾರಣಕ್ಕಾಗಿ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ನಾವು ನಮ್ಮ ಸಮುದಾಯವನ್ನು ಮತ್ತಷ್ಟು ಅಭಿವೃದ್ಧಿ ಹೊಂದಲು, ಶೈಕ್ಷಣಿಕವಾಗಿ ಬೆಳವಣಿಗೆ ಹೊಂದಲು ಪೂರ್ಣ ಪ್ರಯತ್ನ ಪಡಬೇಕು. ಮುಸ್ಲಿಂ ಸಮುದಾಯದ ಯುವಜನತೆ ನಾಗರೀಕ ಸೇವಾ ಪರೀಕ್ಷೆ ಬರೆಯುವಂತಹ ವಾತಾವರಣ ಸೃಷ್ಟಿಸಬೇಕು ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮತ್ತು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಮೌಲಾನ ಸಯ್ಯದ್ ತನ್ವೀರ್ ಹಾಶ್ಮಿ ಸಾಹೇಬ್ ಬಿಜಾಪುರ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಉಡುಪಿ ಪುರಭವನದ ಮಿನಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ‘ಪ್ರಸಕ್ತ ಸನ್ನಿವೇಶ ಮತ್ತು ನಮ್ಮ ಜವಾಬ್ದಾರಿಗಳು’ ಕುರಿತು ವಿಚಾರಗೋಷ್ಠಿಯಲ್ಲಿ ಅವರು ವಿಷಯ ಮಂಡನೆ ಮಾಡಿದರು.

ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಮಸ್ಯೆಗಳನ್ನು ಸುಧಾರಿಸಲು, ಇಸ್ಲಾಮೀ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಿಕೊಳ್ಳುವುದು ಅತೀ ಅಗತ್ಯವಾಗಿದೆ. ಸಮುದಾಯವು ಸಮಾಜ ಸೇವೆಯಲ್ಲಿ ವ್ಯಾಪಕವಾಗಿ ತೊಡಗಿಸಿಕೊಳ್ಳಬೇಕು. ಬಡವರ ನೆರವಿಗೆ ಧಾವಿಸಬೇಕು. ಮುಸ್ಲಿಮೇತರೊಂದಿಗೆ ಉತ್ತಮ ಸಂಬಂಧವನ್ನು ಬೆಳೆಸಬೇಕು. ಹಬ್ಬಗಳ ಸಂದರ್ಭದಲ್ಲಿ ಮುಸ್ಲಿಮೇತರ ಸಹೋದರರನ್ನು ಕರೆದು ಹಬ್ಬದ ಸಂತೋಷವನ್ನು ಹಂಚಿಕೊಳ್ಳಬೇಕು ಎಂದರು.

ಮುಸ್ಲಿಮರು ಧಾರ್ಮಿಕ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಸಂಪೂರ್ಣವಾಗಿ ಅಳವಡಿಸಬೇಕು. ನಮ್ಮ ನಮ್ಮ ಕುಟುಂಬದಲ್ಲಿ, ಮಕ್ಕಳಲ್ಲಿ, ಮಹಿಳೆಯರಲ್ಲಿ, ಪುರುಷರಲ್ಲಿ ಇಸ್ಲಾಮೀ ಮೌಲ್ಯಗಳನ್ನು ಬೆಳೆಸಬೇಕು. ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸಿ ಸಮುದಾಯದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಬೇಕಿದೆ ಎಂದರು.

ಅಖಿಲ ಭಾರತ ಮಿಲ್ಲಿ ಕೌನ್ಸಿಲ್‌ನ ಸಹಾಯಕ ಪ್ರಧಾನ ಕಾರ್ಯದರ್ಶಿ ಮತ್ತು ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ ಆಂದೋಲನದ ಕರ್ನಾಟಕ ಸಹ ಸಂಚಾಲಕ ಸುಲೈಮಾನ್ ಖಾನ್ ಸಾಹೇಬ್ ಬೆಂಗಳೂರು ಮಾತನಾಡಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ವಹಿಸಿದ್ದರು.

ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯ, ಲೇಖಕ ಮುಸ್ತಾಕ್ ಹೆನ್ನಾಬೈಲ್ ಬರೆದ ಧರ್ಮಾಧರ್ಮ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ಒಕ್ಕೂಟದ ಹಿರಿಯ ಉಪಾಧ್ಯಕ್ಷ ರಫೀಕ್ ಕುಂದಾಪುರ, ಉಪಾಧ್ಯಕ್ಷರಾದ ಶಭಿ ಕಾಝಿ, ಫರೀದ್ ಶೇಖ್, ಫಯಾಝ್ ಬೈಂದೂರು ಉಪಸ್ಥಿತರಿದ್ದರು.

ಉಡುಪಿ ಜಾಮೀಯ ಮಸೀದಿಯ ಇಮಾಮ್ ಮೌಲಾನ ರಶೀದ್ ಉಮ್ರಿ ಖಿರಾಅತ್ ಪಠಿಸಿದರು. ಕಾರ್ಯಕ್ರಮ ಸಂಚಾಲಕ ಮೌಲಾನ ಝಮೀರ್ ಅಹ್ಮದ್ ರಶಾದಿ ಸ್ವಾಗತಿಸಿದರು. ಒಕ್ಕೂಟದ ಮಾಜಿ ಜಿಲ್ಲಾಧ್ಯಕ್ಷ ಎಂ.ಪಿ.ಮೊದಿನಬ್ಬ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೇನ್ ಕಟಪಾಡಿ ವಂದಿಸಿದರು. ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.

‘ಸಾಮಾಜಿಕ ಜಾಲಾತಾಣದಲ್ಲಿ ಸಮುದಾಯದ ಯುವಕರು ಆಕ್ಷೇಪಾರ್ಹ ಪೋಸ್ಟ್‌ಗಳು ಮಾಡದಂತೆ ಜಾಗೃತಿ ಮೂಡಿಸಬೇಕು. ಸಾಮಾಜಿಕ ಜಾಲಾತಾಣದ ದ್ವೇಷಪೂರಿತ ವಾತಾವರಣ ಹಾಗೂ ಕೋಮುವಾದದ ಕ್ಷೋಭೆಗಳಿಂದ ನಮ್ಮ ಸಮುದಾಯ ದೂರ ಇರಬೇಕು’

-ಮೌಲಾನ ಸಯ್ಯದ್ ತನ್ವೀರ್ ಹಾಶ್ಮಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X