Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮತ್ಸ್ಯ ಮೇಳಕ್ಕೆ ಮಾರುಹೋದ ಜನರು

ಮತ್ಸ್ಯ ಮೇಳಕ್ಕೆ ಮಾರುಹೋದ ಜನರು

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು7 Feb 2026 1:23 PM IST
share
ಮತ್ಸ್ಯ ಮೇಳಕ್ಕೆ ಮಾರುಹೋದ ಜನರು
ಜನಮನ ಗೆದ್ದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ‌

ರಾಯಚೂರು : ಎಡೆದೊರೆ ನಾಡು ರಾಯಚೂರಿನ ಜಿಲ್ಲಾ ಉತ್ಸವದ ಸಂಭ್ರಮಕ್ಕೆ ಈ ಬಾರಿ ಹೊಸ ಶಕ್ತಿ ತುಂಬಿರುವುದು ಬೃಹತ್ ಮತ್ಸ್ಯ ಮೇಳ. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿರುವ ಆಡಳಿತ ಕಚೇರಿ ಕಟ್ಟಡದ ಕೆಳ ಮಹಡಿಯಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಆಯೋಜಿಸಿರುವ ಈ ಮೇಳ, ಜಲಲೋಕದ ವೈಭವವನ್ನು ನಗರವಾಸಿಗಳ ಮುಂದೆ ತೆರೆದಿಟ್ಟಿದೆ.

ಪ್ರವೇಶ ದ್ವಾರದಲ್ಲೇ ಕಾಣಿಸುವ ಆಕರ್ಷಕ ಫಲಕಗಳು ಮತ್ತು ಸಜ್ಜಿಕೆ ಮೇಳದ ವಿಶೇಷತೆಯನ್ನು ಹೇಳುವಂತಿದ್ದು, ಒಳಗೆ ಕಾಲಿಟ್ಟ ಕ್ಷಣವೇ ಬಣ್ಣಬಣ್ಣದ ಮೀನುಗಳಿಂದ ಕೂಡಿದ ಜಲಲೋಕ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಕರ್ನಾಟಕದ ಕಡಲ ತೀರ ಪ್ರದೇಶಗಳಲ್ಲಿ ಕಂಡುಬರುವ ಒಟ್ಟು 65 ಬಗೆಯ ಅಪರೂಪದ ಹಾಗೂ ಅಲಂಕಾರಿಕ ಮತ್ಸ್ಯಗಳನ್ನು ಒಂದೇ ವೇದಿಕೆಯಲ್ಲಿ ವೀಕ್ಷಿಸುವ ಅವಕಾಶ ಈ ಮೇಳದ ಪ್ರಮುಖ ಆಕರ್ಷಣೆಯಾಗಿದೆ.

ಮೀನುಗಳ ವೈವಿಧ್ಯತೆ, ಮಕ್ಕಳಿಗೆ ಕಲಿಕೆ, ಹಿರಿಯರಿಗೆ ಆನಂದ

ಗೋಲ್ಡ್ ಫಿಶ್, ಆಸ್ಕರ್ ಫಿಶ್, ಪಫರ್ ಫಿಶ್, ಬಾರ್ಮಸ್ ಸೇರಿದಂತೆ ವಿವಿಧ ತಳಿಯ ಅಲಂಕಾರಿಕ ಮೀನುಗಳು ತಮ್ಮದೇ ಆದ ಬಣ್ಣ, ಆಕಾರ ಹಾಗೂ ಚಲನೆಯೊಂದಿಗೆ ಪ್ರೇಕ್ಷಕರ ಗಮನ ಸೆಳೆಯುತ್ತಿವೆ. ಕಣ್ಣು ಮಿಟುಕಿಸದೆ ಮೀನುಗಳನ್ನು ನೋಡುತ್ತಿರುವ ಮಕ್ಕಳು, ಕುತೂಹಲದಿಂದ ಪ್ರಶ್ನೆಗಳನ್ನು ಕೇಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಈ ಮೇಳ ಮಕ್ಕಳಿಗೆ ಕೇವಲ ಮನರಂಜನೆಯಷ್ಟೇ ಅಲ್ಲ, ಮೀನುಗಳ ಹೆಸರು, ವಾಸಸ್ಥಾನ ಹಾಗೂ ಗುಣಲಕ್ಷಣಗಳನ್ನು ತಿಳಿದುಕೊಳ್ಳುವ ಕಲಿಕೆಯ ವೇದಿಕೆಯೂ ಆಗಿದೆ.

ಅಲಂಕಾರಿಕ ಮೀನು ಸಾಕಣೆಗೆ ಉತ್ತೇಜನ

ಮೇಳದ ಮತ್ತೊಂದು ವಿಶೇಷ ಅಂಶವೆಂದರೆ ಅಲಂಕಾರಿಕ ಮೀನು ಸಾಕಣೆಯ ಮಹತ್ವದ ಬಗ್ಗೆ ನೀಡಲಾಗುತ್ತಿರುವ ಮಾಹಿತಿ. ಇದರ ಆರ್ಥಿಕ ಸಾಧ್ಯತೆಗಳು, ಸ್ವ ಉದ್ಯೋಗವಾಗಿ ರೂಪಿಸಿಕೊಳ್ಳಬಹುದಾದ ಅವಕಾಶಗಳ ಕುರಿತು ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ತಜ್ಞರು ಭೇಟಿ ನೀಡುವವರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ವಿಶೇಷವಾಗಿ ಯುವಜನರು ಹಾಗೂ ರೈತರು ಹೆಚ್ಚಿನ ಆಸಕ್ತಿ ತೋರಿಸುತ್ತಿರುವುದು ಗಮನಾರ್ಹ.

ಜಿಲ್ಲಾ ಉತ್ಸವಕ್ಕೆ ಹೆಚ್ಚುವರಿ ಕಳೆ: ಜಿಲ್ಲೆಯ ವಿವಿಧ ತಾಲೂಕುಗಳಷ್ಟೇ ಅಲ್ಲದೆ ಸುತ್ತಮುತ್ತಲ ಪ್ರದೇಶಗಳಿಂದಲೂ ಜನರು ಮೇಳವನ್ನು ವೀಕ್ಷಿಸಲು ಆಗಮಿಸುತ್ತಿದ್ದು, ಸಂಜೆ ವೇಳೆಗೆ ಜನಸಂದಣಿ ಹೆಚ್ಚಾಗುತ್ತದೆ. ಬಣ್ಣಬಣ್ಣದ ಮೀನುಗಳ ನಡುವೆ ನಿಂತು ಮೊಬೈಲ್‌ಗಳಲ್ಲಿ ಚಿತ್ರಗಳನ್ನು ಸೆರೆಹಿಡಿದು ನೆನಪುಗಳನ್ನು ಉಳಿಸಿಕೊಳ್ಳುವ ದೃಶ್ಯಗಳು ಉತ್ಸವದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುತ್ತಿವೆ.

ಮನರಂಜನೆ, ಜ್ಞಾನ ಮತ್ತು ಉದ್ಯೋಗಾವಕಾಶಗಳ ಸಂದೇಶವನ್ನು ಒಂದೇ ಸಮಯದಲ್ಲಿ ನೀಡುತ್ತಿರುವ ಈ ಮತ್ಸ್ಯ ಮೇಳ, ರಾಯಚೂರು ಜಿಲ್ಲಾ ಉತ್ಸವದ ಪ್ರಮುಖ ಆಕರ್ಷಣೆಯಾಗಿ ಗುರುತಿಸಿಕೊಂಡಿದ್ದು, ಉತ್ಸವದ ಸಂಭ್ರಮಕ್ಕೆ ವಿಶಿಷ್ಟ ಕಳೆ ನೀಡುತ್ತಿದೆ.

ಬಗೆಬಗೆಯ ಮೀನುಗಳು ಕಂಡು ಬೆರಗಾದ ಮಕ್ಕಳು: ಇಂದು ಮೊದಲ ದಿನಕ್ಕಿಂತ ದುಪ್ಪಟ್ಟಾಗಿ ಜನಸಾಗರವೇ ಹರಿದು ಬಂತು. ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ತಂಡೋಪತಂಡವಾಗಿ ಆಗಮಿಸಿದ್ದು ಕಂಡುಬಂತು. ಸರತಿ ಸಾಲಿನಲ್ಲಿ ನಿಂತು ಮತ್ಸ್ಯ ಮೇಳದ ಸೊಬಗು ಆನಂದಿಸಿದರು.

share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X