Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ಅಂಬೇಡ್ಕರ್ ಅವರ ಶಿಕ್ಷಣ-ಸಂಘಟನೆ-ಹೋರಾಟ...

ಅಂಬೇಡ್ಕರ್ ಅವರ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದನ್ನು ಪಾಲಿಸಿ : ಸಿಎಂ ಸಿದ್ದರಾಮಯ್ಯ ಕರೆ

► "ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ" ► ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Jun 2025 5:32 PM IST
share
ಅಂಬೇಡ್ಕರ್ ಅವರ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದನ್ನು ಪಾಲಿಸಿ : ಸಿಎಂ ಸಿದ್ದರಾಮಯ್ಯ ಕರೆ

ಗದಗ : ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯ ಎಂದರು.

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿದವರಿಗೆ ಕೊಟ್ಟಿರುವ ಮಂತ್ರ. ಆದರೆ, ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದರು.

ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ‌ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ . ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ‌ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ‌ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು. ಶಿಕ್ಷಣ ದೊರಕದಿದ್ದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವೇ ಇಲ್ಲ. ನನಗೆ ರಾಜಪ್ಪ ಎನ್ನುವ ಶಿಕ್ಷಕರು ಸಿಗದೇ ಹೋಗಿದ್ದರೆ ನನಗೆ ಶಿಕ್ಷಣವೂ ಸಿಗುತ್ತಿರಲಿಲ್ಲ, ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹಸು ಕಾಯ್ಕೊಂಡು ಇರಬೇಕಾಗಿತ್ತು ಎಂದರು.

ಅದಕ್ಕೇ ನಮ್ಮ ಸರಕಾರ ಶಿಕ್ಷಣ-ಆರೋಗ್ಯ-ಅನ್ನಕ್ಕೆ ಪ್ರಮುಖ ಆದ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X