Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ...

ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ : ಸಿಎಂ ಸಿದ್ದರಾಮಯ್ಯ ಬೇಸರ

ವಾರ್ತಾಭಾರತಿವಾರ್ತಾಭಾರತಿ20 Sept 2025 4:54 PM IST
share
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ : ಸಿಎಂ ಸಿದ್ದರಾಮಯ್ಯ ಬೇಸರ
"ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ"

ಗದಗ : ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು? ಎಂದು ಪ್ರಶ್ನಿಸಿದರು.‌

ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದರು.

ಶಿಕ್ಷಣ-ಸಂಘಟನೆ-ಹೋರಾಟ ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು.

ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದರು.

ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದರು.

ನಾಡಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈಗ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಜಾತಿ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಸಿಎಂ ಕರೆ

ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಕರೆ ನೀಡಿದರು.

ನಾವೇ ನಂಬರ್ ಒನ್:

ನಾವು ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ಪಕ್ಷದವರಿಗಾಗಿ ಜಾರಿಗೆ ತಂದ ಗ್ಯಾರಂಟಿ ಕಾರ್ಯಕ್ರಮಗಳಿಂದ ರಾಜ್ಯದ ಜನತೆ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ಏರಿದ್ದಾರೆ. ತಲಾ ಆದಾಯದಲ್ಲಿ ದೇಶದಲ್ಲಿ ನಾವೇ ನಂಬರ್ ಒನ್ ಆಗಿರುವುದೇ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದರು.

ಸಚಿವರಾದ ಎಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಾಸಕರಾದ ರಾಘವೇಂದ್ರ ಹಿಟ್ನಾಳ್ , ರಾಕೇಶ್ ಧವನ್ ಸಿದ್ದರಾಮಯ್ಯ ಸೇರಿ ಮಾಜಿ ಸಚಿವರು, ಶಾಸಕರು ಹಾಗೂ ಸಮುದಾಯದ ಮುಖಂಡರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X