Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ಸಿಗದ ಪರಿಹಾರ: ನ್ಯಾಯಾಲಯದ ಆದೇಶದಂತೆ ಗದಗ...

ಸಿಗದ ಪರಿಹಾರ: ನ್ಯಾಯಾಲಯದ ಆದೇಶದಂತೆ ಗದಗ ಡಿಸಿ, ಎಡಿಸಿ ಕಾರು ಜಪ್ತಿಗೆ ಸಜ್ಜಾದ ರೈತರು

ವಾರ್ತಾಭಾರತಿವಾರ್ತಾಭಾರತಿ23 Sept 2026 3:45 PM IST
share
ಸಿಗದ ಪರಿಹಾರ: ನ್ಯಾಯಾಲಯದ ಆದೇಶದಂತೆ ಗದಗ ಡಿಸಿ, ಎಡಿಸಿ ಕಾರು ಜಪ್ತಿಗೆ ಸಜ್ಜಾದ ರೈತರು

ಗದಗ: ಶಿಂಗಟಾಲೂರು ಏತ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತರಿಗೆ ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಹಿನ್ನೆಲೆಯಲ್ಲಿ ಗದಗ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಯವರ ವಾಹನಗಳನ್ನು ಜಪ್ತಿ ಮಾಡಲು ರೈತರು ಮುಂದಾಗಿದ್ದಾರೆ.

ಮುಂಡರಗಿ ತಾಲೂಕಿನ ಮೇವುಂಡಿ ಹಾಗೂ ಬರದೂರು ಗ್ರಾಮದ 17 ರೈತರಿಗೆ ಹೆಚ್ಚುವರಿ ಪರಿಹಾರ ಪಾವತಿಯಾಗಿಲ್ಲ ಎಂಬುದು ರೈತರ ಆರೋಪ. 2017ರಿಂದಲೂ ಹೆಚ್ಚುವರಿ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಈ ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. 2024ರಲ್ಲಿ ನ್ಯಾಯಾಲಯವು ಎಕರೆಗೆ 30 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿತ್ತು. ಆದರೆ ಆದೇಶವಾಗಿ ಎರಡು ವರ್ಷಗಳು ಕಳೆದರೂ ಪರಿಹಾರ ಪಾವತಿಯಾಗಿಲ್ಲ ಎಂದು ರೈತರು ದೂರಿದ್ದಾರೆ.

ಪರಿಹಾರ ಪಾವತಿಯಾಗದ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ನ್ಯಾಯಾಲಯವು ಜಿಲ್ಲಾಧಿಕಾರಿ ಕಚೇರಿಯ ಪರಿಕರಗಳು ಹಾಗೂ ಸರಕಾರಿ ವಾಹನಗಳ ಜಪ್ತಿಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರೈತರು ಹಾಗೂ ವಕೀಲರು ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ಅವರ ಕಾರುಗಳನ್ನು ಜಪ್ತಿ ಮಾಡಲು ಮುಂದಾಗಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆಯೂ ಮೇವುಂಡಿ, ಶಿರನಹಳ್ಳಿ ಹಾಗೂ ಬರದೂರು ಗ್ರಾಮದ ರೈತರ ಪರವಾಗಿ ಜಪ್ತಿ ಆದೇಶ ಹೊರಬಂದಿತ್ತು. ಆಗಸ್ಟ್ 14ರಂದು ರೈತರ ತಂಡ ಜಿಲ್ಲಾಧಿಕಾರಿ ಕಾರನ್ನು ಜಪ್ತಿ ಮಾಡಿತ್ತು. ಬಳಿಕ ಜಿಲ್ಲಾಡಳಿತ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಕಾರನ್ನು ವಾಪಸ್ ಪಡೆಯಲಾಗಿತ್ತು.

ಶಿಂಗಟಾಲೂರು ಏತ ನೀರಾವರಿ ಯೋಜನೆಗಾಗಿ ಭೂಮಿ ನೀಡಿದ ರೈತರಿಗೆ ಆರಂಭದಲ್ಲಿ ಎಕರೆಗೆ 50 ಸಾವಿರ ರೂ. ಪರಿಹಾರ ನಿಗದಿಪಡಿಸಲಾಗಿತ್ತು. ಪರಿಹಾರ ಮೊತ್ತ ಹೆಚ್ಚಿಸುವಂತೆ ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದ ಬಳಿಕವೂ ಪರಿಹಾರ ಪಾವತಿಯಾಗದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ನ್ಯಾಯಾಲಯದ ಆದೇಶವನ್ನು ಆಡಳಿತ ಪಾಲಿಸಬೇಕು. ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಾಹನಗಳ ಜಪ್ತಿ ಸೇರಿದಂತೆ ಕಾನೂನುಬದ್ಧ ಹೋರಾಟ ಮುಂದುವರಿಸುವುದಾಗಿ ರೈತರು ಎಚ್ಚರಿಸಿದ್ದಾರೆ.

Tags

Compensation Unpaid:SeizeGadag
share
ವಾರ್ತಾಭಾರತಿ
ವಾರ್ತಾಭಾರತಿ
Next Story
X