ಗದಗ : ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ

ಗದಗ : ಅಂತಾರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ಗದಗ್‌ನಲ್ಲಿಂದು ಜಿಲ್ಲಾ ಪೊಲೀಸ್ ಹಾಗೂ ಔಷಧ ವ್ಯಾಪಾರಿಗಳ ಸಂಘದ ಸಹಯೋಗದಲ್ಲಿ ಆಚರಿಸಲಾಯಿತು.
ನಗರದ ಬಹುತೇಕ ಶಾಲಾ ಕಾಲೇಜು ವಿದ್ಯಾರ್ಥಿಗಳು,ಪೊಲೀಸ್,ಆರೋಗ್ಯ,ಶಿಕ್ಷಣ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಾದಕದ್ರವ್ಯ ವಿರೋಧ ಕುರಿತು ಜಾಗೃತಿ ಮೂಡಿಸಿದರು. ಮಾದಕ ವಸ್ತುಗಳ ಬಳಕೆ ಮಾಡದಂತೆ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ ಕುರಿತು ಜನರಲ್ಲಿ ಅರಿವು ಮೂಡಿಸಿದರು.
ನಂತರ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ ಅಂತರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಉದ್ಘಾಟಿಸಿದರು. ಇನ್ನು ಮಾದಕ ದ್ರವ್ಯಗಳ ಕಳ್ಳಸಾಗಾಣಿಕೆ ಅಪರಾಧವಾಗಿದೆ.ಈ ಮಾದಕ ದ್ರವ್ಯಗಳು ಒಬ್ಬ ವ್ಯಕ್ತಿ ಮೇಲೆ ಪರಿಣಾಮ ಬೀರದೆ ಇಡಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ.ಇದರಿಂದ ಯುವ ಪೀಳಿಗೆಯ ಮೇಲೆ ದುಷ್ಪರಿಣಾಮ ಬೀರುತ್ತೆ. ಇದರಿಂದ ಜನ ಜಾಗೃಕರಾಬೇಕು ಅಂತ ಜನರಲ್ಲಿ ಎಸ್ಪಿ ಬಿ ಎಸ್ ನೇಮಗೌಡ ಮನವರಿಕೆ ಮಾಡಿದರು.