Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ಜಲಸಂಚಾಯಿ ಜನ ಭಾಗಿದಾರಿ 1.0 ಅಭಿಯಾನ:...

ಜಲಸಂಚಾಯಿ ಜನ ಭಾಗಿದಾರಿ 1.0 ಅಭಿಯಾನ: ರಾಜ್ಯದಲ್ಲೇ ಗದಗ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ29 Sept 2025 11:09 PM IST
share
ಜಲಸಂಚಾಯಿ ಜನ ಭಾಗಿದಾರಿ 1.0 ಅಭಿಯಾನ: ರಾಜ್ಯದಲ್ಲೇ ಗದಗ ಪ್ರಥಮ

ಗದಗ, ಸೆ.29: ಕೇಂದ್ರ ಜಲಶಕ್ತಿ ಅಭಿಯಾನದ ಅಂಗವಾಗಿ ‘ಜಲಸಂಚಾಯಿ ಜನಭಾಗಿದಾರಿ 1.0’ ಕಾರ್ಯಕ್ರಮದಡಿ ಗದಗ ಜಿಲ್ಲೆಯು ಜಲ ಸಂರಕ್ಷಣೆ ಅಡಿಯಲ್ಲಿ ಐತಿಹಾಸಿಕ ಸಾಧನೆ ಮಾಡುವ ಮೂಲಕ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಗಳಿಸಿ ಪ್ರಶಂಸೆಗೆ ಪಾತ್ರವಾಗಿದೆ. ಅಲ್ಲದೆ, ದೇಶದ 780 ಜಿಲ್ಲೆಗಳಲ್ಲಿ ಝೋನ್ 3 ಕೆಟಗರಿ 3 ರಲ್ಲಿ 4ನೇ ಸ್ಥಾನ ಪಡೆದು, 25 ಲಕ್ಷ ನಗದು ಬಹುಮಾನಕ್ಕೆ ಭಾಜನವಾಗಿದೆ.

ಏನಿದು ಜಲಸಂಚಾಯಿ ಜನಭಾಗಿದಾರಿ ಅಭಿಯಾನ?: ನೀರಿಗಾಗಿ ಒಂದಾಗಿ ‘ಪ್ರತಿ ಹನಿ ನೀರನ್ನು ಸಂರಕ್ಷಿಸಿ’ ಎಂಬ ಧ್ಯೇಯದೊಂದಿಗೆ ಜಲಸಂಚಾಯಿ ಜನಭಾಗಿದಾರಿ 1.0 ಅಭಿಯಾನವು ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು, ಮಳೆ ನೀರನ್ನು ಸಂಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು, ಹವಾಮಾನ ಸ್ಥಿತಿಗತಿಯನ್ನು ಉತ್ತೇಜಿಸುವುದು ಮತ್ತು ನೀರಿನ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಸ್ಥಳೀಯ ಸಮುದಾಯ, ಸರಕಾರಿ ಸಂಸ್ಥೆಗಳು ಮತ್ತು ಎನ್‌ಜಿಒಗಳ ಸಹಯೋಗದಿಂದ ಈ ಕಾರ್ಯಕ್ರಮವು ನೀರಿನ ಕೊರತೆಯ ಸವಾಲಿಗೆ ಸಮರ್ಥ ಪರಿಹಾರವನ್ನು ಹುಡುಕುವುದಾಗಿದೆ.

ಗದಗ ಜಿಲ್ಲೆಯ ಜಲಕ್ರಾಂತಿ ಕೊಡುಗೆ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸೇರಿದಂತೆ ಇತರ ಯೋಜನೆಗಳಡಿ, ಗದಗ ಜಿಲ್ಲೆಯು 01-04-2024ರಿಂದ 31-03-2025ರವರೆಗೆ 11,971 ಜಲಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಜಲಸಂಚಾಯಿ ಪೋರ್ಟಲ್‌ನಲ್ಲಿ ದಾಖಲಿಸಿದೆ. ಇವುಗಳಲ್ಲಿ 11,329 ವೈಯಕ್ತಿಕ ಮತ್ತು ಸಮುದಾಯ ಬದು ನಿರ್ಮಾಣಗಳು, 75 ಬೋರ್‌ವೆಲ್ ರೀಚಾರ್ಜ್‌ಗಳು, 60 ಸೋಕ್‌ಪಿಟ್‌ಗಳು, 465 ಮಳೆನೀರು ಕೊಯ್ಲು ಕಾಮಗಾರಿಗಳು, 10 ಚೆಕ್ ಡ್ಯಾಂಗಳು ಮತ್ತು 32 ಗಲ್ಲಿ ಪ್ಲಗ್‌ಗಳು ಸೇರಿವೆ.

ಕೇಂದ್ರ ತಂಡದಿಂದ ಮನ್ನಣೆ ಪಡೆದ ಜಿಲ್ಲಾ ಪಂಚಾಯತ್: ಕೇಂದ್ರ ನೋಡಲ್ ಆಫೀಸರ್ ತಂಡವು 2025ರ ಜೂನ್ 16ರಿಂದ 21ರವರೆಗೆ ಗದಗ ಜಿಲ್ಲೆಯಲ್ಲಿ ಶೇ.1 ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಗಳ ಗುಣಮಟ್ಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿತು. ಶೇ.99 ಡೆಸ್ಕ್‌ಟಾಪ್ ಮೌಲ್ಯ ಮಾಪನದಲ್ಲಿಯೂ ಈ ಕಾಮಗಾರಿಗಳು ಉನ್ನತ ಮಾನದಂಡಗಳನ್ನು ಪೂರೈಸಿವೆ ಎಂದು ದಾಖಲಾಗಿದೆ. ಈ ಸಾಧನೆಯು ಗದಗ ಜಿಲ್ಲೆಯನ್ನು ಕರ್ನಾಟಕದಲ್ಲಿ ಮೊದಲ ಸ್ಥಾನಕ್ಕೆ ಒಯ್ದಿತ್ತಲ್ಲದೆ, ದೇಶದಲ್ಲಿ ಝೋನ್‌ 3 ಕೆಟಗರಿ 3, 4ನೇ ಸ್ಥಾನವನ್ನು ಗಳಿಸುವಂತೆ ಮಾಡಿದೆ.

ಈ ಅಭಿಯಾನದ ಯಶಸ್ಸಿಗೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿಗಳು, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮನರೇಗಾ ಯೋಜನೆಯ ಸಹಾಯಕ ಕಾರ್ಯಕ್ರಮ ಸಮನ್ವಯ ಅಧಿಕಾರಿ ಕಿರಣಕುಮಾರ್ ಮತ್ತು ಅವರ ತಂಡ, ಜಿಲ್ಲೆಯ ಡಿಇಒರವರ ಅವಿರತ ಶ್ರಮವೇ ಕಾರಣ. ಗದಗ ಜಿಲ್ಲೆಯ ಈ ಜಲಕ್ರಾಂತಿಯು ರಾಜ್ಯಕ್ಕೆ ಮಾದರಿಯಾಗಿದೆ.

ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಕರ್ನಾಟಕದಲ್ಲೇ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿರುವುದು ಸಂತಸ ತಂದಿದೆ. ಅಂತರ್ಜಲ ಮಟ್ಟ ಹೆಚ್ಚಳ ಮತ್ತು ಪರಿಸರ ಸಂರಕ್ಷಣೆ ಕುರಿತು ಜಿಲ್ಲೆಯ ಅಧಿಕಾರಿಗಳು ಶ್ರಮ ವಹಿಸಿ ಹಲವು ಕಾಮಗಾರಿಗಳನ್ನು ಅನುಷ್ಠಾನ ಮಾಡಿರುವುದು ಪ್ರಶಂಸನೀಯ. ಪ್ರಥಮ ಸ್ಥಾನ ಬಂದಿರುವುದಕ್ಕೆ ಜಿಲ್ಲೆಗೆ ನಗದು ರೂಪದಲ್ಲಿ 25 ಲಕ್ಷ ಅನುದಾನ ನೀಡುತ್ತಿದ್ದಾರೆ. ಬರುವ ಅನುದಾನವನ್ನು ಅಭಿಯಾನದ ಉದ್ದೇಶ ಈಡೇರಿಕೆಗೆ ಬಳಸಿಕೊಳ್ಳಲು ಶ್ರಮಿಸಲಾಗುವುದು.

► ಶ್ರೀಧರ ಸಿ.ಎನ್., ಗದಗ ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಬದು ನಿರ್ಮಾಣ ಕಾಮಗಾರಿ, ಚೆಕ್ ಡ್ಯಾಂ ನಿರ್ಮಾಣ, ಬೋರ್‌ವೆಲ್ ರೀಚಾರ್ಜ್ ಕಾಮಗಾರಿ ಸೇರಿದಂತೆ ಹಲವು ಪರಿಸರ ಸ್ನೇಹಿ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದೆ. ಅನುಷ್ಠಾನ ಮಾಡಲಾದ ಎಲ್ಲ ಕಾಮಗಾರಿಗಳನ್ನು ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಪರಿಶೀಲನೆ ಸಂದರ್ಭದಲ್ಲಿ ಕೇಂದ್ರ ತಂಡ ಜಿಲ್ಲೆಯ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಗದಗ ಜಿಲ್ಲೆಗೆ ಈ ಅಭಿಯಾನದಡಿ ಪ್ರಥಮ ಸ್ಥಾನ ದೊರಕಿರುವುದು ನಮಗೆ ಮತ್ತಷ್ಟು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಪ್ರೋತ್ಸಾಹ ಸಿಕ್ಕಿದಂತಾಗಿದೆ.

► ಸಿ.ಆರ್.ಮುಂಡರಗಿ, ಜಿಪಂ ಉಪ ಕಾರ್ಯದರ್ಶಿ, ಗದಗ

ಜಿಲ್ಲೆಯ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ 11,971 ಕಾಮಗಾರಿಗಳ ಮಾಹಿತಿಯನ್ನು ಜಲಸಂಚಾಯಿ ಜನಭಾಗಿದಾರಿ 1.0 ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ. ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಅತೀ ಹೆಚ್ಚು ಕಾಮಗಾರಿಗಳನ್ನು ಜಿಲ್ಲೆಯಲ್ಲಿ ಅನುಷ್ಠಾನ ಗೊಳಿಸಿರುವುದರಿಂದಲೇ ಈ ಪ್ರಶಸ್ತಿ ಬಂದಿದೆ. ಇದಕ್ಕೆ ಪೂರಕವಾಗಿ ಇನ್ನಷ್ಟು ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮನರೇಗಾ ಯೋಜನೆಯಡಿಯಲ್ಲಿ ನಿಯಮನುಸಾರ ಕ್ರಿಯಾ ಯೋಜನೆ ತಯಾರಿಸಲಾಗುವುದು ಮತ್ತು ಅನುಮೋದನೆ ತೆಗೆದುಕೊಂಡು ಇನ್ನೂ ಹೆಚ್ಚಿನ ಕ್ರಿಯಾತ್ಮಕ ಕಾಮಗಾರಿಗಳನ್ನು ಅನುಷ್ಠಾನ ಮಾಡಲು ಮೇಲಾಧಿಕಾರಿಗಳ ಸೂಚನೆಯಂತೆ ಕ್ರಮ ವಹಿಸಲಾಗುವುದು.

► ಕಿರಣ್‌ಕುಮಾರ್ ಎಸ್.ಎಚ್., ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿ, ಮನರೇಗಾ ವಿಭಾಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X