Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಗದಗ
  4. ರಾಜೀನಾಮೆ ಎಚ್ಚರಿಕೆ ಕೊಟ್ಟ ಶಾಸಕ...

ರಾಜೀನಾಮೆ ಎಚ್ಚರಿಕೆ ಕೊಟ್ಟ ಶಾಸಕ ಎಚ್‌.ಕೆ.ಪಾಟೀಲ್; ಸರಕಾರಕ್ಕೆ ಅ.10ರ ವರೆಗೆ ಗಡುವು ಕೊಟ್ಟಿದ್ದೇಕೆ?

ವಾರ್ತಾಭಾರತಿವಾರ್ತಾಭಾರತಿ20 Sept 2026 6:26 PM IST
share
ರಾಜೀನಾಮೆ ಎಚ್ಚರಿಕೆ ಕೊಟ್ಟ ಶಾಸಕ ಎಚ್‌.ಕೆ.ಪಾಟೀಲ್; ಸರಕಾರಕ್ಕೆ ಅ.10ರ ವರೆಗೆ ಗಡುವು ಕೊಟ್ಟಿದ್ದೇಕೆ?

ಗದಗ : ಬರ ಘೋಷಣೆ ಮಾಡದ ಸರಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ರೈತರ ಹೋರಾಟದ ವೇದಿಕೆಯಲ್ಲೇ ಮಾಜಿ ಸಚಿವ ಹಾಗೂ ಶಾಸಕ ಎಚ್.ಕೆ.ಪಾಟೀಲ್ ʼರಾಜೀನಾಮೆ ಬಾಂಬ್ʼ ಸಿಡಿಸಿದ ಘಟನೆ ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ನಡೆದಿದೆ.

ಗದಗ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡದ ಸರಕಾರದ ವಿರುದ್ಧ ರೈತರು ಇಂದು(ರವಿವಾರ) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಳಗುಂದ ಪಟ್ಟಣದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿ, ರಸ್ತೆ ತಡೆದು ಸರಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಮುಳಗುಂದದ ಗಣೇಶ್ ಗುಡಿಯಿಂದ ಬಸಾಪುರ ಕ್ರಾಸ್‌ವರೆಗೆ ರೈತರ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರವಾರ–ಕೈಗಾ ಹಾಗೂ ಗದಗ–ಇಳಕಲ್ ರಾಜ್ಯ ಹೆದ್ದಾರಿ ತಡೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸರಕಾರದ ವಿರುದ್ಧ ಧಿಕ್ಕಾರ ಕೂಗಿದ ರೈತರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ ರೈತರ ಹೋರಾಟದ ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್.ಕೆ.ಪಾಟೀಲ್, ʼಗದಗ ತಾಲೂಕಿನಲ್ಲಿ ಶೇಕಡಾ -49ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಗದಗದ ಬರ ಪರಿಸ್ಥಿತಿಯ ಬಗ್ಗೆ ಸರಕಾರಕ್ಕೆ ಸ್ಪಷ್ಟ ಮಾಹಿತಿ ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಕದಾಂಪುರದಿಂದ ಕುರ್ತಕೋಟಿವರೆಗೆ ಬೆಳೆ ವೀಕ್ಷಣೆ ಮಾಡಿದ್ದರು. ಇಷ್ಟೆಲ್ಲಾ ಆದರೂ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿರುವುದು ಏಕೆ?. ಯಾರು ಬರ ಘೋಷಣೆ ಮಾಡಲು ಅಡ್ಡಿಯಾಗಿದ್ದಾರೆ..? ಅನ್ಯಾಯ, ಮೋಸ ಸಹಿಸೋದಕ್ಕೆ ಸಾಧ್ಯವಿಲ್ಲ..! ಎಂದು ಹೇಳಿದ್ದಾರೆ.

ನಾನು ರೈತ ಕುಟುಂಬದಿಂದ ಬಂದವನು. ರೈತರ ಸಂಕಷ್ಟದ ಅರಿವಿದೆ ಎಂದು ಹೇಳಿದ ಎಚ್.ಕೆ. ಪಾಟೀಲ್, ಮೂರು ದಿನಗಳಲ್ಲಿ ಬರ ಘೋಷಣೆಗಾಗಿ ಸರಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಅದು ಸಾಧ್ಯವಾಗದಿದ್ದರೆ ವಿಧಾನಸಭೆಯಲ್ಲಿ ಸರಕಾರಕ್ಕೆ ಅಕ್ಟೋಬರ್ 10ರ ವರೆಗೆ ಗಡುವು ನೀಡುತ್ತೇನೆ. ಅಕ್ಟೋಬರ್ 10ರೊಳಗೆ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರೈತರ ಎದುರೇ ಎಚ್.ಕೆ. ಪಾಟೀಲ್ ಘೋಷಿಸಿದ್ದಾರೆ.

ಉತ್ತರ ಕರ್ನಾಟಕದ 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಡಲಾಗಿದೆ. ಈ ಎಲ್ಲ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಬೇಕು ಎಂದು ಸ್ವಪಕ್ಷದ ಸರಕಾರವನ್ನು ಆಗ್ರಹಿಸಿದ್ದಾರೆ.

Tags

H.K.PatilResignation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X