Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇಂದು (ಫೆ.8) ದಮ್ಮಾಮ್ ನಲ್ಲಿ 17ನೇ...

ಇಂದು (ಫೆ.8) ದಮ್ಮಾಮ್ ನಲ್ಲಿ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ8 Feb 2024 5:32 PM IST
share
ಇಂದು (ಫೆ.8) ದಮ್ಮಾಮ್ ನಲ್ಲಿ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ದಮ್ಮಾಮ್ (ಸೌದಿ ಅರೇಬಿಯಾ) : ಇಲ್ಲಿನ ಸಫ್ವಾದಲ್ಲಿ ಇಂದು (ಫೆಬ್ರವರಿ 8) ಸಂಜೆ 7ರಿಂದ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ನಡೆಯಲಿದೆ ಎಂದು ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿಯು ಪ್ರಕಟನೆಯಲ್ಲಿ ತಿಳಿಸಿದೆ.

ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಪೌರಾಡಳಿತ ಮತ್ತು ಹಚ್ ಖಾತೆ ಸಚಿವ ರಹೀಂ ಖಾನ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಡಾ. ಸುಹೇಲ್ ಅಜಾಜ್ ಖಾನ್, ಅನಿವಾಸಿ ಕನ್ನಡಿಗರ ಕೋಶದ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಶಾಸಕರಾದ ಅಶೋಕ್ ಕುಮಾರ್ ರೈ, ಬಿ.ಎಂ. ಫಾರೂಕ್, ಸಾಹಿತಿ ಎಸ್ ಜಿ ಸಿದ್ದರಾಮಯ್ಯ, ಉದ್ಯಮಿಗಳಾದ ಝಕರಿಯಾ ಜೋಕಟ್ಟೆ, ಶೇಖ್ ಕರ್ನಿರೆ, ಇಬ್ರಾಹೀಂ ಹುಸೇನ್, ಅಬ್ದುಲ್ ನಿಶಾನ್, ಅಬ್ದುಲ್ ನಿಶಾನ್, ಯೂನುಸ್ ಕಾಝಿಯಾ, ಯೋಗೀಶ್ ಡಿ. ಪೂಜಾರಿ, ಪತ್ರಕರ್ತ ವಾಲ್ಟರ್ ನಂದಳಿಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್, ಪ್ರಧಾನ ಕಾರ್ಯದರ್ಶಿ ರಫೀಕ್‌ ಸೂರಿಂಜೆ, ಸಮ್ಮೇಳನ ಸಮಿತಿಯ ಸ್ಥಾಪಕಾಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಬಹುಭಾಷಾ ಕವಿಗೋಷ್ಠಿ, ದಫ್ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಸಮ್ಮೇಳನದ ಆಕರ್ಷಣೆಯ ಕೇಂದ್ರ ಬಿಂದುವಾಗಿ ಆಹಾರ ಮಳಿಗೆಗಳನ್ನು ತೆರೆಯಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಿಂದ ಮ್ಯಾಜಿಕ್ ಮತ್ತು ಸ್ಟಾಂಡ್ ಅಪ್ ಕಾಮಿಡಿ, ಕಥಕ್-ಕನ್ನಡ ಗೀತೆಗಳು, ನಗೆ ನಾಟಕ, ದಫ್ ಮತ್ತು ಭರತನಾಟ್ಯ, ಹುಲಿವೇಷ ಕುಣಿತ, ಹ್ಯಾಸ ಪ್ರಹಸನ ಏರ್ಪಡಿಸಲಾಗಿದೆ.

ಕವಿಗಳಾದ ಬಶೀರ್ ಅಹ್ಮದ್ ಕಿನ್ಯ, ಹುಸೈನ್ ಕಾಟಿಪಳ್ಳ, ಮುಹಮ್ಮದ್ ಫೈಝ್, ಸಮದ್ ಗಡಿಯಾರ್, ಸಮೀರ್ ಮುಲ್ಕಿ ಅವರು ‘ಬ್ಯಾರಿ ಮಾಪಿಲೆ ಪಾಟ್’ ಹಾಡಲಿದ್ದಾರೆ. ಕವಯತ್ರಿಯರಾದ ಶಮೀಮಾ ಕುತ್ತಾರ್, ರೈಹಾನ ವಿ.ಕೆ. ಸಚ್ಚರಿಪೇಟೆ, ಫೌಝಿಯಾ ಹರ್ಷದ್ ಭಾಗವಹಿಸಲಿದ್ದಾರೆ.

ಕನ್ನಡ ಸಂಸ್ಕೃತಿಯ ವೈಭವವನ್ನು ಹರಡುವ ಮತ್ತು ಅನಿವಾಸಿ ಕನ್ನಡಿಗರನ್ನು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯೆಡೆಗೆ ಕರೆದೊಯ್ಯುವ ಉದ್ದೇಶವನ್ನು ಹೊಂದಿರುವ ಈ ಐತಿಹಾಸಿಕ ಸಮ್ಮೇಳನವನ್ನು ಸೌದಿ ಅರೇಬಿಯಾದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ ಎಂದು ಸಂಘಟಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X